ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು: ಕಿರಿಮಂಜೇಶ್ವರ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಕೃತಿ ಇಕೋ ಕ್ಲಬ್ ಇವರ ವತಿಯಿಂದ ವಿದ್ಯಾರ್ಥಿಗಳಿಗೆ ಪರಿಸರ ಮಾಹಿತಿ ಕಾರ್ಯಾಗಾರ ನಡೆಯಿತು.
ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಈಶ್ವರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಜಗದೀಶ್ ಕೊಡೇರಿ ಪರಿಸರದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶೇಖರ ಖಾರ್ವಿ ಶಾಲೆಗೆ ಅಗತ್ಯವಿರುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭ ಶಾಲಾ ಮಕ್ಕಳಿಗಾಗಿ ಬೆಂಕಿ ರಹಿತ ಅಡುಗೆ ತಯಾರಿ, ಸ್ಥಳೀಯ ಹಣ್ಣುಗಳ ಪ್ರದರ್ಶನ, ಚಿತ್ರ ಪ್ರದರ್ಶನ ಮುಂತಾದ ಕಾರ‍್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.
ಮುಖ್ಯ ಅತಿಥಿಗಳಾಗಿ ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಸದಸ್ಯ ಕೃಷ್ಣ, ಸಮೂಹ ಸಂಪನ್ಮೂಲ ವ್ಯಕ್ತಿ ನಾಗರಾಜ ಬಂಗ್ಲೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ನ್ಯಾರಿ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ನಾಣು.ಡಿ.ಚಂದನ್, ಎಸ್.ಡಿ.ಎಮ್.ಸಿ ಉಪಾಧ್ಯಕ್ಷ, ಸರ್ವಸದಸ್ಯರು, ಪೋಷಕರು, ಶಿಕ್ಷಕರು ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯರಾದ ಪುಷ್ಪಾ ಎನ್ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.