ಗಂಗೊಳ್ಳಿಯ ಮಲ್ಯರಮಠ: ಅವಭೃತ ಉತ್ಸವ ಸಂಪನ್ನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಗಂಗೊಳ್ಳಿ : ಪುರಾಣ ಪ್ರಸಿದ್ಧ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವರ್ಷಂಪ್ರತಿ ಜರಗುವ ಬ್ರಹ್ಮರಥೋತ್ಸವದ ಕೊನೆಯ ದಿನವಾದ ಮಂಗಳವಾರ ಸಂಜೆ ಅವಭೃತ ಉತ್ಸವ ವಿಜೃಂಭಣೆಯಿಂದ ಜರಗಿತು.

Call us

Click Here

ಮಂಗಳವಾರ ಸಂಜೆ ಅವಭೃತ ಉತ್ಸವ, ಧ್ವಜ ಅವರೋಹಣ, ಮಹಾಪೂಜೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ಮತ್ತು ಅನುಷ್ಠಾನಗಳು ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಮತ್ತು ಅವರ ಪಟ್ಟಶಿಷ್ಯ ಶ್ರೀಮದ್ ವಿದ್ಯಾಧೀಶ ಶ್ರೀಪಾದ ವಡೇರ ಸ್ವಾಮೀಜಿಯವರ ಉಪಸ್ಥಿತಿ ಹಾಗೂ ಮಾರ್ಗದರ್ಶನದಲ್ಲಿ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಎಸ್.ವೆಂಕಟರಮಣ ಆಚಾರ್ಯ ಮತ್ತು ದೇವಳದ ತಾಂತ್ರಿಕ ವೇದಮೂರ್ತಿ ಜಿ.ವಸಂತ ಭಟ್ ನೇತೃತ್ವದಲ್ಲಿ ನಡೆಯಿತು.

ದೇವಳದ ಆಡಳಿತ ಮಂಡಳಿ ಸದಸ್ಯರು, ಪುರೋಹಿತರು, ಅರ್ಚಕರು, ಊರಿನ ಹತ್ತು ಸಮಸ್ತರು, ಸಮಾಜಬಾಂಧವರು ಹಾಗೂ ಭಜಕರು ಉತ್ಸವದಲ್ಲಿ ಪಾಲ್ಗೊಂಡು ಮೊದಲಾದವರು ಶ್ರೀದೇವರ ಪ್ರಸಾದ ಸ್ವೀಕರಿಸಿದರು.

Leave a Reply