ಗಂಗೊಳ್ಳಿ: ತಾಯಂದಿರಿಂದ ಮಕ್ಕಳಿಗೆ ಕೈತುತ್ತು

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಗಂಗೊಳ್ಳಿ: ಮೇಲ್‌ಗಂಗೊಳ್ಳಿಯ ಸರಕಾರಿ ಕಿರಿಯ ಪ್ರಾಥಮಿಕ (ಹವೇ) ಶಾಲೆಯ ಪೂರ್ವ ಪ್ರಾಥಮಿಕ ಶಾಲೆಯ ವತಿಯಿಂದ ತಾಯಂದಿರಿಂದ ಮಕ್ಕಳಿಗೆ ಕೈತುತ್ತು ನೀಡುವ ಕಾರ್ಯಕ್ರಮ ಗುರುವಾರ ನಡೆಯಿತು.

Call us

Click Here

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ರಥಬೀದಿ ಗಂಗೊಳ್ಳಿಯ ಮುಖ್ಯಶಿಕ್ಷಕಿ ಚಂದ್ರಕಲಾ ಮಾತನಾಡಿ ಭಾರತೀಯ ಪರಂಪರೆಯಲ್ಲಿ ತಾಯಿ-ಮಗುವಿನ ಸಂಬಂಧ ಶ್ರೇಷ್ಠವಾದುದು. ಇದು ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದು ಹೇಳಿದರು.

ಶಾಲೆಯ ಮುಖ್ಯ ಶಿಕ್ಷಕ ರಮೇಶ ಮಹಾಲೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಸ್.ಡಿ.ಎಂ.ಸಿ ಅಧ್ಯಕ್ಷ ಚಂದ್ರ ಕೆ., ಗೌರವ ಶಿಕ್ಷಕಿ ಸುನೀತಾ ದಿನೇಶ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಈಶ್ವರ ಜಿ., ಕಿರಣ್ ಎಂ.ಜಿ., ನಟರಾಜ್ ಎಂ.ಜಿ., ಜಗದೀಶ ಮೇಲ್‌ಗಂಗೊಳ್ಳಿ, ಸಂದೀಪ ಮೇಲ್‌ಗಂಗೊಳ್ಳಿ, ಎಸ್‌ಡಿಎಂಸಿ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.

ರಮೇಶ ಮಹಾಲೆ ಸ್ವಾಗತಿಸಿದರು. ಸಹಶಿಕ್ಷಕಿ ಲಲಿತಾ ಕಾರ್ಯಕ್ರಮ ನಿರ್ವಹಿಸಿದರು. ಸುನೀತಾ ದಿನೇಶ ವಂದಿಸಿದರು.

Leave a Reply