ಕಮಲಶಿಲೆ ಗ್ರಾಮವನ್ನು ಆಜ್ರಿ ಗ್ರಾಮ ಪಂಚಾಯತ್‌ಗೆ ಸೇರ್ಪಡೆ ಕುರಿತು-ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಉಡುಪಿ: ಜಿಲ್ಲೆಯಲ್ಲಿ ಹೊಸ ತಾಲೂಕು ರಚನೆಯಿಂದಾಗಿ ಹಳ್ಳಿಹೊಳೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ, ಕಮಲಶಿಲೆ ಗ್ರಾಮವನ್ನು, ಕುಂದಾಪುರ ತಾಲೂಕಿನ ಆರ್ಜಿ ಗ್ರಾಮ ಪಂಚಾಯತ್‌ಗೆ ಸೇರ್ಪಡೆಗೊಳಿಸುವ ಬಗ್ಗೆ ಸರ್ಕಾರದ ಪತ್ರದಲ್ಲಿ ಅನುಮೋದನೆ ನೀಡಲಾಗಿರುತ್ತದೆ.

Call us

Click Here

ಅದರಂತೆ ಕಮಲಶಿಲೆ ಗ್ರಾಮವನ್ನು ಆರ್ಜಿ ಗ್ರಾಮ ಪಂಚಾಯತ್‌ಗೆ ಸೇರ್ಪಡೆಗೊಳಿಸುವ ಬಗ್ಗೆ ಕರಡು ಅಧಿಸೂಚನೆಯನ್ನು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 4 ರಂತೆ ಹೊರಡಿಸಲಾಗಿದ್ದು, ಈ ಅಧಿಸೂಚನೆ ಪ್ರಕಟಿಸಿದ 30 ದಿನಗಳ ಒಳಗೆ ಸಾರ್ವಜನಿಕರು ಜಿಲ್ಲಾಧಿಕಾರಿ ಕಚೇರಿಗೆ ಕಚೇರಿಗೆ ಆಕ್ಷೇಪಣೆ ಸಲ್ಲಿಸುವಂತೆ, ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply