ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಭಾರತೀಯ ರೆಡ್‌ಕ್ರಾಸ್ ಸೊಸೈಟಿ, ಕುಂದಾಪುರ ಘಟಕ, ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕ ಹಾಗೂ ರೆಡ್ ರಿಬ್ಬನ್ ಕ್ಲಬ್ ವತಿಯಿಂದ ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಇದೇ ಸಂದರ್ಭದಲ್ಲಿ ಪ್ರಥಮ ಚಿಕಿತ್ಸೆ ತರಬೇತುದಾರರಾದ ಡಾ| ಸೋನಿ, ಡಾ| ಕೀರ್ತಿಪಾಲನ್ ಹಾಗೂ ಅಲ್ಡ್ರಿನ್‌ರವರು ಪ್ರಥಮ ಚಿಕಿತ್ಸೆ ಕುರಿತು ಪ್ರಾಯೋಗಿಕವಾಗಿ ತರಬೇತಿ ನೀಡಿದರು.
ಮುಖ್ಯ ಅತಿಥಿ, ಕುಂದಾಪುರ ಭಾರತೀಯ ರೆಡ್‌ಕ್ರಾಸ್ ಘಟಕದ ಅಧ್ಯಕ್ಷರಾದ ಜಯಕರ್ ಶೆಟ್ಟಿ ಮಾತನಾಡಿ, ಯಾವ ಸಂದರ್ಭದಲ್ಲಿ ಯಾವ ರೀತಿಯ ಪ್ರಥಮ ಚಿಕಿತ್ಸೆಯ ಅಗತ್ಯವಿದೆ ಎನ್ನುವುದರ ಕುರಿತಾದ ತಿಳುವಳಿಕೆ ಅವಶ್ಯಕ ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ| ಕೊತ್ತಾಡಿ ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಭಾರತೀಯ ರೆಡ್‌ಕ್ರಾಸ್ ಘಟಕದ ಖಜಾಂಚಿ ಶಿವರಾಮ್ ಶೆಟ್ಟಿ ಹಾಗೂ ಕಾರ್ಯಕ್ರಮ ಅಧಿಕಾರಿ ಮುತ್ತಯ್ಯ ಶೆಟ್ಟಿ ಉಪಸ್ಥಿತರಿದ್ದರು.
ಕಾಲೇಜಿನ ಉಪ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಸಿದರು. ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಶಿವರಾಜ್ ಸಿ. ನಾವುಂದ ಸ್ವಾಗತಿಸಿ, ಸಹ ಸಂಯೋಜಕಿ ಸೌಮ್ಯ ಎನ್. ಕುಂದರ್ ವಂದಿಸಿದರು. ವಿದ್ಯಾರ್ಥಿನಿ ಅಕ್ಷತಾ ನಿರೂಪಿಸಿದರು.
ಸುಮಾರು 75 ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಈ ಸಂದರ್ಭದಲ್ಲಿ ಪ್ರಥಮ ಚಿಕಿತ್ಸೆಯ ಕುರಿತಾದ ಪ್ರಾಯೋಗಿಕ ತರಬೇತಿ ನೀಡಲಾಯಿತು.















