ಕುಂದಾಪ್ರ ಡಾಟ್ ಕಾಂ ಸುದ್ದಿ
ಗಂಗೊಳ್ಳಿ: ಹೆಣ್ಣು ಮಕ್ಕಳು ವಿದ್ಯಾರ್ಥಿ ದೆಸೆಯಲ್ಲಿಯೇ ವಿವಿಧ ನೆಲೆಯಲ್ಲಿ ಸಾಮಾಜಿಕವಾಗಿ ತನ್ನನ್ನು ತೊಡಗಿಸಿಕೊಳ್ಳಬೇಕು. ಪುರುಷ ಪ್ರಧಾನ ವ್ಯವಸ್ಥೆ, ಸಾಮಾಜಿಕವಾಗಿ ಮಹಿಳೆ ಬಹುಮುಖಿ ನೆಲೆಯಲ್ಲಿ ತನ್ನನ್ನು ಗುರುತಿಸಿಕೊಂಡು ಆದರ್ಶ ನಾರಿಯಾಗಿ ಬಾಳಬೇಕು ಎಂದು ಸ.ವಿ.ಹಿರಿಯ ಪ್ರಾಥಮಿಕ ಶಾಲೆಯ ಗೌರವ ಶಿಕ್ಷಕಿ ರೇಣುಕಾ ಆರ್.ನಾಯಕ್ ಹೇಳಿದರು.
ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಇಂದುಶ್ರೀ ಮಹಿಳಾ ಸಂಘ ಗಂಗೊಳ್ಳಿ ಇವರ ಆಶ್ರಯದಲ್ಲಿ ಜರಗಿದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸ.ವಿ.ಹಿರಿಯ ಪ್ರಾಥಮಿಕ ಶಾಲೆಯ ಗೌರವ ಶಿಕ್ಷಕಿಯರಾದ ಲಕ್ಷ್ಮೀ ಖಾರ್ವಿ, ಮಾಲಾಶ್ರೀ ಖಾರ್ವಿ, ರೇಖಾ ಖಾರ್ವಿ, ಭೂದೇವಿ ಶುಭ ಹಾರೈಸಿದರು. ಸಾರ್ವಜನಿಕ ಸೇವಾ ಕ್ಷೇತ್ರದ ಸಾಧನೆಗಾಗಿ ಗಂಗೊಳ್ಳಿ ಮಲ್ಯರಬೆಟ್ಟು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ರೇಖಾ ಕೆ.ಖಾರ್ವಿ ಅವರನ್ನು ಸನ್ಮಾನಿಸಲಾಯಿತು. ಶಾಲೆಯ ಮುಖ್ಯ ಶಿಕ್ಷಕ ಜಿ.ವಿಶ್ವನಾಥ ಭಟ್, ದೈಹಿಕ ಶಿಕ್ಷಣ ಶಿಕ್ಷಕ ನಾರಾಯಣ ಶೆಟ್ಟಿ, ಸಹಶಿಕ್ಷಕ ನಾರಾಯಣ ಉಪಾಧ್ಯಾಯ, ಗ್ರಾಪಂ ಸಿಬ್ಬಂದಿ ನಾರಾಯಣ ಶ್ಯಾನುಭಾಗ್, , ಜಿ.ಈಶ್ವರ, ಸುಶೀಲ, ಗಂಗಾ, ಗೌರಿ ಬಿ. ಮತ್ತಿತರರು ಉಪಸ್ಥಿತರಿದ್ದರು.
ಇಂದುಶ್ರೀ ಮಹಿಳಾ ಮಂಡಲದ ಕಾರ್ಯದರ್ಶಿ ನಾಗಿಣಿ ಸ್ವಾಗತಿಸಿದರು. ಗೌರವ ಶಿಕ್ಷಕ ನಾಗರಾಜ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು. ಸಾಂಸ್ಕೃತಿಕ ಕಾರ್ಯದರ್ಶಿ ಮಮತಾ ವಂದಿಸಿದರು.