Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಾಜಾರಾಮ್ ತಲ್ಲೂರು ಅವರಿಗೆ ಶಿವರಾಮ ಕಾರಂತ ಪುರಸ್ಕಾರ ಪ್ರದಾನ
    alvas nudisiri

    ರಾಜಾರಾಮ್ ತಲ್ಲೂರು ಅವರಿಗೆ ಶಿವರಾಮ ಕಾರಂತ ಪುರಸ್ಕಾರ ಪ್ರದಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಮೂಡುಬಿದಿರೆ: ಬದುಕಿಗೆ ವಿಮುಖವಾಗಿ ಕಾರಂತರು ಇದ್ದವರಲ್ಲ. ಕಾರಂತರನ್ನು ಚಿರಸ್ಥಾಯಿಯನ್ನಾಗಿ ಉಳಿಸಿಕೊಳ್ಳುವುದಕ್ಕೆ ಸಂಘ ಸಂಸ್ಥೆಗಳನ್ನು ಕಟ್ಟುವ ಅಗತ್ಯವಿಲ್ಲ. ಅವರ ಸಾಹಿತ್ಯ ಕೃತಿಗಳೇ ಅವರನ್ನು ಚಿರಾಯುವಾಗಿ ಉಳಿಸುತ್ತದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಮ್ ಮೋಹನ್ ಆಳ್ವ ಹೇಳಿದರು.

    Click Here

    Call us

    Click Here

    ಆಳ್ವಾಸ್ ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ಶಿವರಾಮ ಕಾರಂತ ಪ್ರತಿಷ್ಠಾನ, ಮೂಡುಬಿದಿರೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ನಡೆದ ಶಿವರಾಮ ಕಾರಂತ ಪ್ರಶಸ್ತಿ, ಶಿವರಾಮ ಕಾರಂತ ಪುರಸ್ಕಾರ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

    ಕೋಟ ಶಿವರಾಮ ಕಾರಂತರು ಸಾಹಿತ್ಯ ಕ್ಷೇತ್ರದಲ್ಲಿ ಪ್ರಭಾವಿಸಿದ ಪರಿ ದೊಡ್ಡದು. ವಿಚಾರ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದವರು ಕಾರಂತರು. ಅವರದ್ದು ಅಂಕುಶವಿಲ್ಲದ ವೈಚಾರಿಕ ಪ್ರಜ್ಞೆ. ಎಂದಿಗೂ ಜಾತಿ, ಧರ್ಮವನ್ನು ಭಿನ್ನತೆಯನ್ನು ಬೆಂಬಲಿಸಿದವರಲ್ಲ. ಕಾರಂತರ ಚಿಂತನೆ, ಸಾಹಿತ್ಯ ಎಂದಿಗೂ ಪ್ರಸ್ತುತ. ಅವರ ಜೀವನಾದರ್ಶವೇ ನಮ್ಮ ಬದುಕಿಗೆ ಪಾಠ ಎಂದರು.

    ಶಿವರಾಮ ಕಾರಂತ ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದ ಹಿರಿಯ ಸಾಹಿತಿ ಟಿ. ಎಂ ಸುಬ್ಬರಾಯ, ಕಾರಂತರು ಸಾಹಿತ್ಯ ಕ್ಷೇತ್ರಕ್ಕೆ ಮೇರು ಉದಾಹರಣೆ. ಅವರ ಸಾಹಿತ್ಯದಲ್ಲಿ ಪ್ರಾದೇಶಿಕತೆಯ ಸೊಗಡಿತ್ತು, ಭಾಷೆಯಿತ್ತು, ಆಚಾರ ವಿಚಾರಗಳಿತ್ತು. ಸಾಹಿತ್ಯಕ್ಕೆ ಮೂಲವೇ ಪ್ರಾದೇಶಿಕತೆ. ಪ್ರಾದೇಶಿಕತೆಯನ್ನು ಹೊರತಾಗಿ ಇರುವ ಸಾಹಿತ್ಯಕ್ಕೆ ಗಟ್ಟಿತನವಿರುವುದಿಲ್ಲ ಎಂದರು.

    ರಾಜಾರಾಮ್ ತಲ್ಲೂರು ಅವರ ’ತಲ್ಲೂರು ಎಲ್. ಎನ್’ ಕೃತಿಗೆ ಹಾಗೂ ಡಾ| ಪಿ. ಚಂದ್ರಿಕಾ ಅವರ ’ಮೋದಾಳಿ’ ಕೃತಿಗೆ ದಿವಂಗತ ಶ್ರೀಮತಿ ವನಜಾಕ್ಷಿ ಶ್ರೀಪತಿ ಭಟ್ ಸ್ಮರಣಾರ್ಥ ಹಾಗೂ ದಿವಗಂತ ಕೆ. ಶೀನಪ್ಪ, ಮೂಡುಬಿದಿರೆ ಸ್ಮರಣಾರ್ಥ ಶಿವರಾಮ ಕಾರಂತ ಪುರಸ್ಕಾರವನ್ನು ನೀಡಿ ಸನ್ಮಾನಿಸಲಾಯಿತು.

    Click here

    Click here

    Click here

    Click Here

    Call us

    Call us

    ಈ ಸಂದರ್ಭ ಮೂಡುಬಿದಿರೆ ವಲಯದ ಪ್ರೌಢ ಶಾಲಾ ಮಟ್ಟದ ’ಶಿವರಾಮ ಕಾರಂತ ಓದು’ ಸ್ಪರ್ಧೆಯ ಪ್ರಥಮ ಬಹುಮಾನವನ್ನು ಆಳ್ವಾಸ್ ಆಂಗ್ಲ ಮಾದ್ಯಮ ಶಾಲೆಯ ಸಿದ್ದರಾಮಯ್ಯ ಎಚ್.ಕೆ, ರೋಟರಿ ಆಂಗ್ಲ ಮಾದ್ಯಮ ಶಾಲೆಯ ವೈಷ್ಣವಿ ಭಟ್‌ಗೆ ಹಾಗೂ ದ್ವಿತೀಯ ಬಹುಮಾನವನ್ನು ಆಳ್ವಾಸ್ ಕನ್ನಡ ಮಾದ್ಯಮ ಶಾಲೆಯ ಶಿವರಾಮ್ ಹಾಗೂ ಸಾಕ್ಷಿ ಆರ್.ಕೆ ಅವರಿಗೆ ವಿತರಿಸಲಾಯಿತು.

    ಶಿವರಾಮ ಕಾರಂತ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ, ಮಾಜಿ ಸಚಿವ ದಿ. ಕೆ. ಅಮರನಾಥ ಶೆಟ್ಟಿಯವರಿಗೆ ಎಮ್.ಸಿ.ಎಸ್ ಬ್ಯಾಂಕ್, ಮೂಡುಬಿದಿರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಮ್. ಚಂದ್ರಶೇಖರ ನುಡಿನಮನ ಸಲ್ಲಿಸಿದರು.

    ತದನಂತರ ’ಸಾಹಿತ್ಯ ಸ್ಪಂದನ’ ಉಪನ್ಯಾಸ ಕಾರ್ಯಕ್ರಮ ನಡೆಯಿತು.

    ಉದ್ಯಮಿ ಕೆ. ಶ್ರೀಪತಿ ಭಟ್, ಭಾನುಮತಿ ಶೀನಪ್ಪ, ಮೂಡುಬಿದಿರೆ, ಶಿವರಾಮ ಕಾರಂತ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಡಾ. ಜಯಪ್ರಕಾಶ್ ಮಾವಿನಕುಳಿ, ಕೋಶಾಧಿಕಾರಿ ಕೆ. ಕೃಷ್ಣರಾಜ ಹೆಗ್ಡೆ, ಪ್ರತಿಷ್ಠಾನದ ಸದಸ್ಯ ರಾಜಾರಾಂ ಮೂಡುಬಿದಿರೆ, ಆಳ್ವಾಸ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಯೋಗೀಶ್ ಕೈರೋಡಿ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಆಳ್ವಾಸ್ ಪತ್ರಿಕೋದ್ಯಮ ವಿಭಾಗದಲ್ಲಿ ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರ ಸಂಕಿರಣ

    30/04/2026
    Leave A Reply Cancel Reply

    fifteen − twelve =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.