ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ: ಕುಂದಾಪುರ ಪಂಚಾಯತ್ ರಾಜ್ ಒಕ್ಕೂಟದ ವಿರೋಧ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಗ್ರಾಮ ಸರ್ಕಾರವನ್ನು ಸ್ಥಳೀಯ ಸ್ವಯಂ ಸರ್ಕಾರವಾಗಿ ರೂಪಿಸುವ ಮೂಲಕ ಗ್ರಾಮ ಸ್ವರಾಜ್ಯದ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳುವ ಬದಲು ಗ್ರಾಮ ಪಂಚಾಯತ್ ಮತ್ತು ಗ್ರಾಮಸಭೆಯ ಅಧಿಕಾರವನ್ನು ಕಿತ್ತುಕೊಂಡು ಇಡೀ ಪಂಚಾಯತ್ ರಾಜ್ ವ್ಯವಸ್ಥೆಯನ್ನು ದುರ್ಬಲಗೊಳಿಸಲು ಹೊರಟಿರುವ ಕರ್ನಾಟಕ ರಾಜ್ಯ ಸರ್ಕಾರದ ಎಲ್ಲಾ ನಡೆಗಳನ್ನು ಕುಂದಾಪುರ ತಾಲೂಕು ಪಂಚಾಯತ್ ರಾಜ್ ಒಕ್ಕೂಟವು ತೀವ್ರವಾಗಿ ಖಂಡಿಸುತ್ತದೆ ಎಂದು ಪಂಚಾಯತ್ ರಾಜ್ ಒಕ್ಕೂಟದ ಅಧ್ಯಕ್ಷರಾದ ಉದಯಕುಮಾರ್ ಶೆಟ್ಟಿ ಹೇಳಿದರು.

Call us

Click Here

ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿರುವ ಸರ್ಕಾರದ ನಡೆಯ ಕುರಿತು ಚರ್ಚಿಸಲು ಕುಂದಾಪುರ ತಾಲೂಕು ಪಂಚಾಯತ್ ರಾಜ್ ಒಕ್ಕೂಟವು ಸೋಮವಾರ ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸಭೆ ನಡೆಸಿತು.

ಈಗ ಇರುವ ಗ್ರಾಮ ಸ್ವರಾಜ್ ಕಾಯ್ದೆಯು ಉತ್ತಮವಾದ ಕಾಯ್ದೆಯಾಗಿದ್ದು ಗ್ರಾಮ ಸ್ವರಾಜ್ ಸ್ಥಾಪನೆಗೆ ಪೂರಕವಾದ ಎಲ್ಲಾ ಅಂಶಗಳನ್ನು ಒಳಗೊಂಡಿದೆ. ಈ ಕಾಯ್ದೆಯ ತಿದ್ದುಪಡಿ ಸಮಯದಲ್ಲಿ ಕುಂದಾಪುರ ಪಂಚಾಯತ್ ರಾಜ್ ಒಕ್ಕೂಟ ಹಾಗೂ ಗ್ರಾಮ ಪಂಚಾಯತ್ ಹಕ್ಕೊತ್ತಾಯ ಆಂದೋಲನವು ಸಕ್ರಿಯವಾಗಿ ತೊಡಗಿಸಿಕೊಂಡು ತನ್ನದೇ ಆದ ಕೊಡುಗೆಯನ್ನು ನೀಡಿದೆ. ರಾಜ್ಯದ ಕೆಲವು ಗ್ರಾಮ ಪಂಚಾಯತ್‌ಗಳಲ್ಲಿ ನಡೆದ ಅಕ್ರಮವನ್ನು ಆಧಾರವಾಗಿಟ್ಟುಕೊಂಡು ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿರುವ ಗ್ರಾಮ ಸಭೆಯ ಅಧಿಕಾರಗಳನ್ನು ಕಿತ್ತುಕೊಳ್ಳುವುದು ಈ ಸಮಸ್ಯೆಗೆ ಪರಿಹಾರವಲ್ಲ. ಅಕ್ರಮ ನಡೆದಿರುವ ಪಂಚಾಯತ್‌ಗಳಲ್ಲಿ ಸೂಕ್ತ ತನಿಖೆಯ ಮೂಲಕ ಅದನ್ನು ತಡೆಯಬೇಕೇ ಹೊರತು ಕಾಯ್ದೆ ತಿದ್ದುಪಡಿಯ ಮೂಲಕ ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‌ಗಳ ಗ್ರಾಮ ಸಭೆಯ ಹಕ್ಕನ್ನು ಕಸಿದುಕೊಂಡು ಕಾಯ್ದೆಯನ್ನು ದುರ್ಬಲಗೊಳಿಸುವುದು ಸರಿಯಲ್ಲ ಎಂದರು.

ಒಕ್ಕೂಟದ ಗೌರವಾಧ್ಯಕ್ಷರಾದ ಜನಾರ್ಧನ ಮರವಂತೆಯವರು ಮಾತನಾಡಿ, ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿಗಳನ್ನು ತರುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಈ ಕುರಿತು ಎಲ್ಲಾ ಶಾಸಕರು ಪಕ್ಷಭೇದ ಮರೆತು ಮಾತನಾಡಬೇಕು. ಶಾಸಕರು ಹಾಗೂ ಅಧಿಕಾರಿಗಳ ಹಂತದಲ್ಲಿ ಆಗುತ್ತಿರುವ ಬದಲಾವಣೆ ಇದಾಗಿದ್ದು, ನಾವು ಮಾಡುವ ಪ್ರತಿಭಟನೆಯಿಂದ ಇದನ್ನು ನಿಲ್ಲಿಸಿಯೇ ಬಿಡುತ್ತೇವೆ ಎಂದು ನಂಬುವ ಸ್ಥಿತಿಯಿಲ್ಲ. ಆದರೆ ಇದನ್ನು ತಡೆಯುವತ್ತ ನಮ್ಮ ಪ್ರಯತ್ನವನ್ನು ಮುಂದುವರೆಸಬೇಕು ಎಂದರು.

ಪ್ರಥಮ ಹಂತದಲ್ಲಿ ಕುಂದಾಪುರದ ಎಲ್ಲಾ ಗ್ರಾಮ ಪಂಚಾಯತ್‌ಗಳು ಈ ತಿದ್ದುಪಡಿಗಳನ್ನು ವಿರೋಧಿಸಿ ನಿರ್ಣಯವನ್ನು ಮಾಡಿ ಸರ್ಕಾರರಕ್ಕೆ ಕಳುಹಿಸುವುದು ಹಾಗೂ ಮುಖ್ಯವಮಂತ್ರಿಗಳು ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖಾ ಸಚಿವರನ್ನು ಭೇಟಿಯಾಗಿ ಈ ತಿದ್ದುಪಡಿಗಳನ್ನು ತರದಂತೆ ಒತ್ತಾಯಿಸುವ ನಿರ್ಣಯವನ್ನು ಕೈಗೊಳ್ಳಲಾಯಿತು.

Click here

Click here

Click here

Click Here

Call us

Call us

ಸಭೆಯಲ್ಲಿ ವಿವಿಧ ಗ್ರಾಮ ಪಂಚಾಯತ್‌ನ ಅಧ್ಯಕ್ಷರು, ಉಪಾಕ್ಷರು ಹಾಗೂ ಸದಸ್ಯರು, ಗ್ರಾಮಪಂಚಾಯತ್ ಹಕ್ಕೊತ್ತಾಯ ಆಂದೋಲನದ ಕಾರ್ಯಲಯದ ಪ್ರತಿನಿಧಿಗಳು ಭಾಗವಹಿಸಿದ್ದರು. ಒಕ್ಕೂಟದ ಪ್ರಧಾನ ಕಾರ್ಯದರ್ಶಿಗಳಾದ ಸದಾಶಿವ ಪಡುವರಿ ಸ್ವಾಗತಿಸಿ ವಂದಿಸಿದರು.

Leave a Reply