ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಪ್ರಶಸ್ತಿ: ಅರ್ಜಿ ಆಹ್ವಾನ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಉಡುಪಿ: 2020-21 ನೇ ಸಾಲಿನಲ್ಲಿ ಡಾ| ಬಾಬು ಜಗಜೀವನ ರಾಮ ರವರ 113 ನೇ ಹಾಗೂ ಡಾ| ಬಿ.ಆರ್ ಅಂಬೇಡ್ಕರ್ ರವರ 129 ನೇ ಜನ್ಮ ದಿನಾಚರಣೆ ಅಂಗವಾಗಿ ಪ್ರಶಸ್ತಿ ನೀಡುವ ಬಗ್ಗೆ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೊತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ, 2020-21 ರ ಸಾಲಿನ ಡಾ| ಬಾಬು ಜಗಜೀವನ ರಾಮ ಹಾಗೂ ಡಾ| ಬಿ.ಆರ್ ಅಂಬೇಡ್ಕರ್ ಪ್ರಶಸ್ತಿಗಳನ್ನು ನೀಡಿ ಗೌರವಿಸಲು ಉದ್ದೇಶಿಸಲಾಗಿರುತ್ತದೆ.

Call us

Click Here

ಜಿಲ್ಲೆಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳು ತಮ್ಮ ಸವಿವರವುಳ್ಳ ಅರ್ಜಿ ನಮೂನೆಯನ್ನು ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಉಡುಪಿ ಜಿಲ್ಲೆಯಿಂದ ಪಡೆದು ಭರ್ತಿ ಮಾಡಿ, ಮಾರ್ಚ್ 19 ರ ಒಳಗೆ ಉಪನಿರ್ದೇಶಕರು ಹಾಗೂ ಸದಸ್ಯ ಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ಜಿಲ್ಲೆ, ದೂರವಾಣಿ ಸಂಖ್ಯೆ:0820-2574892, ಇ-ಮೇಲ್: ddswudp@gmail.com , ಈ ವಿಳಾಸಕ್ಕೆ ಅಂಚೆ ಮೂಲಕವಾಗಲಿ ಅಥವಾ ಖುದ್ದಾಗಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Leave a Reply