Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋವಿಡ್ – 19 ತಡೆಗೆ ಮುನ್ನೆಚ್ಚರಿಕೆ ಕ್ರಮ: ಉಡುಪಿ ಜಿಲ್ಲೆಯಲ್ಲಿ ಸೆಕ್ಷನ್ 144 ಜಾರಿ
    ಉಡುಪಿ ಜಿಲ್ಲೆ

    ಕೋವಿಡ್ – 19 ತಡೆಗೆ ಮುನ್ನೆಚ್ಚರಿಕೆ ಕ್ರಮ: ಉಡುಪಿ ಜಿಲ್ಲೆಯಲ್ಲಿ ಸೆಕ್ಷನ್ 144 ಜಾರಿ

    Updated:18/03/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಕೋವಿಡ್ -19 (ಕರೋನಾ ವೈರಾಣು ಕಾಯಿಲೆ 2019) ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುತ್ತಿರುವ ಹೊರತಾಗಿಯೂ, ಸೊಂಕು ಹರಡುವ ಸಾಧ್ಯತೆ ಹೆಚ್ಚಿರುವ ಕಾರ್ಯಕ್ರಮಗಳನ್ನು ನಿಯಂತ್ರಿಸುವ ಸಲುವಾಗಿ ಉಡುಪಿ ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ಮಾಚ್ 18ರಿಂದ ಜಾರಿಗೆ ಬರುವಂತೆ ಸೆಕ್ಷನ್ 144 ಜಾರಿಗೊಳಿಸಿ, ಆದೇಶ ಹೊರಡಿಸಿದ್ದಾರೆ.

    Click Here

    Call us

    Click Here

    ಆದೇಶದಲ್ಲಿ ಈ ನಿಯಮಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ:
    1. ಜಿಲ್ಲೆಯಾದ್ಯಂತ ದೇವಸ್ಥಾನಗಳಲ್ಲಿ ನಡೆಯುವ ಉತ್ಸವ/ಜಾತ್ರೆಗಳಲ್ಲಿ ಕೇವಲ ಅಲ್ಲಿನ ಸಿಬ್ಬಂದಿ ಮಾತ್ರ ಭಾಗವಹಿಸಬೇಕು ಮತ್ತು ಉತ್ಸವಗಳಲ್ಲಿ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
    2. ಭಕ್ತರಿಗೆ ದೇವರ ದರ್ಶನಕ್ಕಷ್ಟೇ ಅವಕಾಶ ನೀಡಿ ಉಳಿದೆಲ್ಲ ಸೇವೆಗಳನ್ನು ರದ್ದುಪಡಿಸಲಾಗಿದೆ. ದೇವಸ್ಥಾನಗಳಿಗೆ ಬರುವ ಸಾರ್ವಜನಿಕರಿಗೆ ತಂಗಲು ಅವಕಾಶ ಇರುವುದಿಲ್ಲ.
    3. ದೇವಸ್ಥಾನ, ಮಸೀದಿ, ಚರ್ಚ್ ಒಳಗೊಂಡಂತೆ ಎಲ್ಲ ಧಾರ್ಮಿಕ ಕೇಂದ್ರಗಳಲ್ಲಿ ಗುಂಪು ಗುಂಪಾಗಿ ಸಾರ್ವಜನಿಕರು ಪ್ರವೇಶಿಸಬಾರದೆಂದು ಸೂಚಿಸಲಾಗಿದೆ.
    4. ಬೇಸಗೆ ಶಿಬಿರ, ಸಮಾರಂಭಗಳು, ವಿಚಾರ ಸಂಕಿರಣಗಳು ಮತ್ತಿತರ ಯಾವುದೇ ಕಾರ್ಯಕ್ರಮಗಳನ್ನು ಆಯೋಜಿಸಬಾರದು
    5. ವಾರದ ಸಂತೆಗಳನ್ನು ನಿರ್ಬಂಧಿಸಿದೆ.
    6. ಬೀಚ್ ಹಾಗೂ ಪ್ರವಾಸಿ ತಾಣಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
    7. ಮದುವೆ, ನಿಶ್ಚಿತಾರ್ಥ ಸಮಾರಂಭಗಳಲ್ಲಿ ಹೆಚ್ಚಿನ ಜನಸಂದಣಿ ಸೇರದಂತೆ ಸರಳವಾಗಿ ಆಯೋಜಿಸಲು ಸೂಚಿಸಿದೆ.
    8. ಹೆಚ್ಚು ಜನರು ಸೇರುವ ಕುಟುಂಬದ ಧಾರ್ಮಿಕ ಕಾರ್ಯಕ್ರಮಳನ್ನು ತಮ್ಮ ಸ್ವಂತ ಸ್ಥಳದಲ್ಲಿ ಆಚರಿಸುವುದು ಮತ್ತು ಹೊರಗಿನವರು ಸೇರುವುದು ತಡೆಯುವ ಬಗ್ಗೆ ಆದೇಶದಲ್ಲಿ ಸೂಚಿಸಲಾಗಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಪಿಜಿ, ವಸತಿ ನಿಲಯಗಳಲ್ಲಿ ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮಗಳು:
    * ಪಿಜಿ ಮತ್ತು ವಸತಿ ನಿಲಯಗಳಲ್ಲಿ ವಾಸಿಸುವ ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳಿಗೆ ಈಗಾಗಲೇ ರಜೆ ಘೋಷಿಸಿರುವುದರಿಂದ ಮನೆಗಳಿಗೆ ವಾಪಸು ಹೋಗಲು ಸಲಹೆ ನೀಡುವುದು.
    * ಒಂದು ವೇಳೆ ಯಾರಾದರೂ ಉಳಿದುಕೊಳ್ಳಲು ಬಯಸಿದ್ದಲ್ಲಿ ಅಂತಹವರಿಗೆ ಪಿಜಿ ಹಾಗೂ ವಸತಿ ನಿಲಯಗಳ ಮಾಲಕರು/ ವ್ಯವಸ್ಥಾಪಕರು ರಾಜ್ಯ ಸರಕಾರದ ಸಲಹೆಗಳಂತೆ ವೈಯಕ್ತಿಕ ಸ್ವಚ್ಛತೆಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕು.
    * ಪರಿಸರದ ಸ್ವಚ್ಛತೆ ಕಾಪಾಡುವುದು ಪಿಜಿ / ವಸತಿನಿಲಯಗಳ ಮಾಲಕರ/ ವ್ಯವಸ್ಥಾಪಕರ ಜವಾಬ್ದಾರಿ.
    * ಈ ಮೇಲಿನ ನಿರ್ದೇಶನಗಳನ್ನು ಅನುಸರಿಸದೇ ಕೊರೊನಾ ಹರಡಲು ಕಾರಣಕರ್ತರಾದವರ ವಿರುದ್ಧ ಕಠಿನ ಕ್ರಮ ಜರಗಿಸಲಾಗುವುದು. ಮತ್ತು ಪಿಜಿ ಹಾಗೂ ವಸತಿ ನಿಲಯಗಳನ್ನು ಕೈಗೊಂಡ ಕ್ರಮಗಳನ್ನು ಸ್ಥಳೀಯ ಸಂಸ್ಥೆಗಳಿಗೆ ತಿಳಿಸುವುದು. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಈ ಮೇಲಿನ ಎಲ್ಲಾ ಆದೇಶವನ್ನು ಮಾಚ್ 18ರಿಂದ ಜಾರಿಗೆ ಬರುವಂತೆ ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಆದೇಶದಲ್ಲಿ ಸೂಚಿಸಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

     

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    5 + 7 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.