ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಪೊಲೀಸ್ ಉಪವಿಭಾಗ ಕಚೇರಿಗೆ ಪಶ್ಚಿಮ ವಲಯ ನೂತನ ಐಜಿಪಿ ದೇವಜ್ಯೋತಿ ರಾಯ್ ಬುಧವಾರ ಭೇಟಿ ನೀಡಿದರು. ಈ ವೇಳೆ ಮಾತನಾಡಿ ಅಕ್ರಮ ಯಾವುದೇ ಇರಲಿ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಿ ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪೊಲೀಸ್ ಅಧಿಕಾರಿಗಳ ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿ, ಸಾರ್ವಜನಿಕರು ಯಾವುದೇ ಅಕ್ರಮಗಳ ಕುರಿತು ನಿರ್ಭೀತಿಯಿಂದ ನೇರ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬಹುದು. ಉಡುಪಿ ಜಿಲ್ಲೆಯಾದ್ಯಂತ ಆನ್‌ಲೈನ್ ಮೂಲಕ ನಡೆಯುವ ಕ್ರಿಕೆಟ್ ಬೆಟ್ಟಿಂಗ್, ಗಾಂಜಾ ಅವ್ಯವಹಾರ, ಅಕ್ರಮ ಮರಳುಗಾರಿಕೆ, ಅಕ್ರಮ ಗಣಿಗಾರಿಕೆ ನಡೆಸುತ್ತಿರುವ ವಿರುದ್ಧ ಪೊಲೀಸರು ಸೂಕ್ತ ಗಮನ ಹರಿಸಲಿದ್ದಾರೆ. ಗಾಂಜಾ ಸಾಗಾಟ ಮತ್ತು ಮಾರಾಟ ಮಾಡುವ ಕಿಂಗ್‌ಫಿನ್ ಪತ್ತೆಹಚ್ಚಿ ಕಾನೂನು ಕ್ರಮಕೈಗೊಳ್ಳಲಾಗುತ್ತದೆ ಎಂದರು. ಕುಂದಾಪ್ರ ಡಾಟ್ ಕಾಂ .
ಪೊಲೀಸ್ ಠಾಣೆಗಳಲ್ಲಿ ಸಿಬ್ಬಂಧಿಗಳ ಕೊರತೆಯಿದ್ದು ಇದರಿಂದ ಕೊಂಚ ಸಮಸ್ಯೆಯಾಗುತ್ತಿದ್ದು ಇರುವ ವ್ಯವಸ್ಥೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲಾಗುತ್ತಿದೆ ಎಂದ ಅವರು, ಅಧಿಕಾರ ವಹಿಸಿಕೊಂಡು ಮೂರು ದಿನಗಳಷ್ಟೇ ಆಗಿದ್ದು ಪಶ್ಚಿಮ ವಲಯ ವ್ಯಾಪ್ತಿಯ ಪರಿಚಯ ಹಾಗೂ ಅಧಿಕಾರಿಗಳ ಜತೆ ವಿಚಾರ ವಿನಿಮಯ ನಡೆಸುವ ನಿಟ್ಟಿನಲ್ಲಿ ಆಗಮಿಸಿದ್ದೇನೆ. ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ನಕ್ಸಲ್ ಚಟುವಟಿಕೆ ಕುರಿತು ಸದ್ಯಕ್ಕೆ ಮಾಹಿತಿಗಳಿಲ್ಲ. ಅಂತಹ ಚಟುವಟಿಕೆ ಕಂಡುಬಂದರೆ ಪೊಲೀಸ್ ಇಲಾಖೆ ಕೈಗೊಳ್ಳಲಿದೆ ಎಂದರು. ಕುಂದಾಪ್ರ ಡಾಟ್ ಕಾಂ .
ಉಡುಪಿ ಎಸ್‌ಪಿ ವಿಷ್ಣುವರ್ಧನ್, ಕುಂದಾಪುರ ಎಎಸ್‌ಪಿ ಹರಿರಾಮ್ ಶಂಕರ್ ಉಪಸ್ಥಿತರಿದ್ದರು.ಕುಂದಾಪ್ರ ಡಾಟ್ ಕಾಂ .