ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಶೇಂಗಾ ಖರೀದಿ ಕೇಂದ್ರ ತೆರೆಯಲು ಪ್ರಸ್ತಾವನೆ ಸಲ್ಲಿಸಿ: ಜಿಲ್ಲಾಧಿಕಾರಿ ಜಿ.ಜಗದೀಶ್

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಉಡುಪಿ: ಶೇಂಗಾದ ಮಾರುಕಟ್ಟೆ ಧಾರಣೆಯು ಕುಸಿತವಾಗಿರುವುದರಿಂದ, ಜಿಲ್ಲೆಯ ರೈತರಿಂದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಶೇಂಗಾ ಖರೀದಿಸುವ ಬಗ್ಗೆ ಸರಕಾರಕ್ಕೆ ಕೂಡಲೆ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.

Call us

Click Here

ಅವರು ಬುಧವಾರ ಜಿಲ್ಲಾಧಿಕಾರಿ ಕಛೇರಿಯಲ್ಲಿ ನಡೆದ, ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರಸ್ತುತ ಮಾರುಕಟ್ಟೆಯಲ್ಲಿ ಶೇಂಗಾ ದರವು ಕ್ವಿಂಟಾಲ್‌ಗೆ ರೂ.4500 ರಿಂದ 4800 ಇದ್ದು, ಕೇಂದ್ರ ಸರ್ಕಾರವು 2019-20 ನೇ ಮುಂಗಾರು ಹಂಗಾಮಿಗೆ ಎಫ್.ಎ.ಕ್ಯೂ ಗುಣಮಟ್ಟದ ಶೇಂಗಾಕ್ಕೆ ಕ್ವಿಂ.1ಕ್ಕೆ ರೂ. 5,090 ಎಂದು ನಿಗದಿಪಡಿಸಲಾಗಿದೆ. ಆದ್ದರಿಂದ ಜಿಲ್ಲೆಯಲ್ಲಿ ಶೇಂಗಾ ಖರೀದಿ ತೆರೆಯುವುದರಿಂದ ಜಿಲ್ಲೆಯ ರೈತರಿಗೆ ಸಹಾಯಕವಾಗಲಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು.

ಸಭೆಯಲ್ಲಿ ಕೃಷಿ ಇಲಾಖೆಯ ಉಪ ನಿರ್ದೇಶಕ ಚಂದ್ರ ಶೇಖರ್ ನಾಯಕ್ ಮತ್ತು ಕೃಷಿ ಮಾರಾಟ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Leave a Reply