Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊರೊನಾ ವೈರಸ್ ಭೀತಿ ಹಿನ್ನೆಲೆ: ಉಡುಪಿ ಜಿಲ್ಲೆಯಲ್ಲಿ ಸರಕಾರಿ ಸೇವೆ ಭಾಗಶಃ ಸ್ಥಗಿತ
    ಉಡುಪಿ ಜಿಲ್ಲೆ

    ಕೊರೊನಾ ವೈರಸ್ ಭೀತಿ ಹಿನ್ನೆಲೆ: ಉಡುಪಿ ಜಿಲ್ಲೆಯಲ್ಲಿ ಸರಕಾರಿ ಸೇವೆ ಭಾಗಶಃ ಸ್ಥಗಿತ

    Updated:21/03/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಉಡುಪಿ: ಕೊರೊನಾ ವೈರಾಣು ವ್ಯಕ್ತಿಗೆ ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ, ಕರ್ನಾಟಕ ಸಾಂಕ್ರಾಮಿಕ ರೋಗಗಳು, ಕೋವಿಡ್-19 ರೆಗ್ಯೂಲೇಷನ್ಸ್-2020 ರ ನಿಯಮ 12 ರಲ್ಲಿ ಹಾಗೂ Disaster Management Act 2005 ಕಲಂ 24 (ಎ), (ಬಿ), 30 (2) ರಡಿಯಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ, ಈ ಕೆಳಕಂಡ ಸೇವೆಗಳನ್ನು ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ ಹೊರಡಿಸಿರುತ್ತಾರೆ.

    Click Here

    Call us

    Click Here

    ಸ್ಥಗಿತಗೊಂಡ ಸೇವೆಗಳು: ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಕಂದಾಯ ಇಲಾಖೆಯ ಆಧಾರ್ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ನೀಡಲಾಗುತ್ತಿರುವ ಸೇವೆಗಳು, ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿ ನೀಡಲಾಗುತ್ತಿರುವ ಹೊಸ ವಾಹನ ಚಾಲನಾ ರಹದಾರಿ, ಕಲಿಯುವವರ ಪರವಾನಿಗೆ ನೋಂದಣಿ (ಏಪ್ರಿಲ್ 15 ರ ವರೆಗೆ ಸಿಂಧುತ್ವ ಹೊಂದಿರುವ ಕಲಿಕಾ ಚಾಲನಾ ಅನುಜ್ಞಾ ಪತ್ರಗಳ ಅಭ್ಯರ್ಥಿಗಳಿಗೆ ಮಾತ್ರ ವಾಹನಾ ಚಾಲನಾ ಅನುಜ್ಞಾ ಪತ್ರಗಳಿಗೆ ಪರೀಕ್ಷೆಗೆ ಹಾಜರಾಗಲು ಈ ನಿರ್ಬಂಧ ಅನ್ವಯಿಸುವುದಿಲ್ಲ), ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಸಾರ್ವಜನಿಕರಿಗೆ ನೀಡಲಾಗುತ್ತಿರುವ ಸೇವೆಗಳು ( ಸಾರ್ವಜನಿಕ ಹರಾಜುಗಳು, ಗ್ರಾಮಸಭೆ, ಇತರ ಲೈಸೆನ್ಸ್ ನೀಡುವಿಕೆ ಸೇವೆಗಳು), ಸರಕಾರಿ ಸಂಘಗಳ ಉಪನಿಬಂಧಕರು ಹಾಗೂ ಸಹಕಾರ ಸಂಘಗಳ ಸಹಾಯಕ ಉಪನಿಬಂಧಕರು, ಸಹಕಾರ ಇಲಾಖೆಗೆ ಸಂಬಂಧಿಸಿದಂತೆ ನೀಡಲಾಗುವ ಸೇವೆಗಳು (ಬ್ಯಾಂಕಿಂಗ್ ಹೊರತುಪಡಿಸಿ), ಕೃಷಿ / ತೋಟಗಾರಿಕೆ / ಮೀನುಗಾರಿಕೆ ಇಲಾಖೆಯಲ್ಲಿನ ವಿವಿಧ ಸೇವೆಗಳು (ರೈತ ಆತ್ಮಹತ್ಯೆ, ರೈತರ ಆಕಸ್ಮಿಕ ಮರಣಗಳು ಹಾಗೂ ಇತರೆ ತುರ್ತು ವಿಷಯಗಳನ್ನು ಹೊರತುಪಡಿಸಿ), ಸಮಾಜ ಕಲ್ಯಾಣ ಇಲಾಖೆ / ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ/ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಅಧೀನದಲ್ಲಿ ಬರುವ ನಿಗಮ ಮಂಡಳಿಗಳ ಸೇವೆಗಳು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕನ್ನಡ -ಸಂಸ್ಕೃತಿ ಇಲಾಖೆಯ ಸೇವೆಗಳು ಸ್ಥಗಿತಗೊಳ್ಳಲಿವೆ. ಪಹಣಿ ವಿತರಣಾ ಸೇವೆ, ಸ್ಪಂದನಾ ಕೇಂದ್ರಗಳ ಸೇವೆ, ಉಪನೋಂದಣಾಧಿಕಾರಿ ಕಚೇರಿಗಳಲ್ಲಿ ಬೆಳಗಿನ ಕಚೇರಿಯ ಅವಧಿಯಲ್ಲಿ 10 ದಾಸ್ತಾವೇಜುಗಳನ್ನು, ಮಧ್ಯಾಹ್ನದ ಅವಧಿಯಲ್ಲಿ 10 ದಾಸ್ತಾವೇಜುಗಳನ್ನು, ಪ್ರತಿ ದಾಸ್ತಾವೇಜಿನ ನೊಂದಣಿ ಬಗ್ಗೆ 15 ನಿಮಿಷಗಳ ಅಂತರವಿರಿಸಿ ಸಮಯ ನಮೂದಿಸಿ ಟೋಕನ್‌ಗಳನ್ನು ವಿತರಿಸಿ, ದಾಸ್ತಾವೇಜುಗಳ ನೊಂದಣಿಗೆ ಕ್ರಮ ವಹಿಸಬೇಕು.

    ಸ್ಥಗಿತದ ಆದೇಶ ಅನ್ವಯವಾಗದ ಸೇವೆಗಳು: ಬ್ಯಾಂಕ್, ಅಂಚೆಕಚೇರಿ, ಪೊಲೀಸ್ ಸೇವೆಗಳು, ಅಗ್ನಿಶಾಮಕ ಸೇವೆಗಳು, ದೂರವಾಣಿ ಸೇವೆಗಳು, ಇಂಟರ್‌ನೆಟ್ ಸೇವೆಗಳು, ಕೆ.ಎಸ್.ಆರ್.ಟಿ.ಸಿ, ಸಾರಿಗೆ ಸೇವೆಗಳು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸೇವೆಗಳು, ಸ್ವಚ್ಚತೆ ಕಾರ್ಯಕ್ರಮಗಳು, ಕುಡಿಯುವ ನೀರು, ವಿದ್ಯುತ್‌ಚ್ಛಕ್ತಿ ಪೂರೈಕೆ, ಒಳಚರಂಡಿ ವ್ಯವಸ್ಥೆ, ಅಂಗಡಿಗಳು, ಆಸ್ಪತ್ರೆ ಸೇವೆಗಳು, ಪಶು ಆಸ್ಪತ್ರೆಗಳು, ಔಷಧಿ ಅಂಗಡಿಗಳು, ಶವ ಸಂಸ್ಕಾರ ಇತ್ಯಾದಿ ಸೇವೆಗಳು ಹಾಗೂ ತುರ್ತು ಸೇವೆಗಳಿಗೆ ಸ್ಥಗಿತದ ಆದೇಶವು ಅನ್ವಯವಾಗುವುದಿಲ್ಲ.

    ಮೇಲ್ಕಂಡ ಸೇವೆಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದ್ದರೂ ಸಹ ಸದರಿ ಕಚೇರಿಗಳಿಗೆ ರಜೆ ಘೋಷಣೆ ಮಾಡಿರುವುದಿಲ್ಲ ಹಾಗೂ ಸಂಬಂಧಿಸಿದ ಎಲ್ಲಾ ಅಧಿಕಾರಿ / ಸಿಬ್ಬಂದಿ ವರ್ಗದವರು ಎಂದಿನಂತೆ ಕಚೇರಿಯಲ್ಲಿ ಲಭ್ಯ ಇರಬೇಕು. ಅನಧೀಕೃತ ಗೈರು ಹಾಜರಿ ಅಥವಾ ಅನಧೀಕೃತವಾಗಿ ಕಚೇರಿಯನ್ನು ತೆರೆಯದಿದ್ದಲ್ಲಿ ಸದರಿ ಅಧಿಕಾರಿ/ ಸಿಬ್ಬಂದಿಗಳ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು. ಏಕಕಾಲದಲ್ಲಿ ಕಚೇರಿಗೆ ಹೆಚ್ಚು ಜನರ ಪ್ರವೇಶವನ್ನು ನಿರ್ಬಂಧಿಸಬೇಕು. ನೊಂದಣಿಗೆ ಬರುವವರಲ್ಲಿ ಯಾರಿಗಾದರೂ ಶೀತ, ನೆಗಡಿ ಮತ್ತು ಕೆಮ್ಮು ಇಲ್ಲವೆಂದು ಖಾತ್ರಿ ಪಡಿಸಿಕೊಳ್ಳಬೇಕು ಹಾಗೂ ಸ್ಯಾನಿಟಯಸರ್ ಬಳಸಿ ಒಳ ಪ್ರವೇಶಿಸುವ ಬಗ್ಗೆ ಅಗತ್ಯ ವ್ಯವಸ್ಥೆ ಮಾಡಬೇಕು.

    ಆದೇಶದ ಅನ್ವಯ ಸರ್ಕಾರದ ಸೇವೆಗಳನ್ನು ಒದಗಿಸುವ ಕಚೇರಿ/ ಕೇಂದ್ರಗಳಲ್ಲಿ ಸೇವೆಗಳನ್ನು ಒದಗಿಸದ ಕಾರಣ ಯಾವುದೇ ಸರ್ಕಾರಿ/ ಖಾಸಗಿ/ ನಿಗಮ ಮಂಡಳಿಗಳು ಯಾವುದೇ ವ್ಯಕ್ತಿಯ ದಾಖಲಾತಿಗಳನ್ನು ಹಾಜರುಪಡಿಸದ ಕಾರಣದಿಂದ ಅಂತಹ ವ್ಯಕ್ತಿಗೆ ವ್ಯತಿರಿಕ್ತವಾಗುವ ರೀತ್ಯಾ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳತಕ್ಕದ್ದಲ್ಲ ಹಾಗೂ ಅಂತಹ ದಾಖಲಾತಿಯನ್ನು ಹಾಜರುಪಡಿಸಲು ಸಾಕಷ್ಟು ಕಾಲಾವಕಾಶವನ್ನು ನೀಡಬೇಕು.

    Click here

    Click here

    Click here

    Call us

    Call us

    ಸರ್ಕಾರಿ ಕಚೇರಿಗಳಿಗೆ (ಜಿಲ್ಲಾಧಿಕಾರಿಗಳು / ಉಪವಿಭಾಗಾಧಿಕಾರಿಗಳು/ ತಹಶೀಲ್ದಾರರು/ ಸ್ಥಳೀಯ ಸಂಸ್ಥೆಗಳು/ ಇತರೆ ಕಚೇರಿಗಳು ಸೇರಿದಂತೆ) ಅಥವಾ ಧಾರ್ಮಿಕ ಕೇಂದ್ರಗಳಿಗೆ ಸಾರ್ವಜನಿಕರು ಭೇಟಿ ನೀಡುವುದನ್ನು ನಿರ್ಬಂಧಿಸಲಾಗಿದ್ದು, ಈ ನಿರ್ಬಂಧ ತುರ್ತು ಸಂದರ್ಭದಲ್ಲಿ ಹಾಗೂ ತುರ್ತು ವಿಷಯಗಳಿಗೆ ಅನ್ವಯವಾಗುವುದಿಲ್ಲ.

    ಮೇಲ್ಕಂಡ ಸೇವೆಗಳಲ್ಲಿ ಸರ್ಕಾರ ಹಾಗೂ ನ್ಯಾಯಾಲಯಗಳಿಗೆ ಸಂಬಂಧಿಸಿದ ಪ್ರಕರಣಗಳು ಮತ್ತು ಅತಿ ತುರ್ತು ಪ್ರಕರಣಗಳಿಗೆ ವಿನಾಯಿತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    06/12/2025

    ಇಎಸ್ಐ ಮತ್ತು ಇಪಿಎಫ್ ಸೌಲಭ್ಯದಿಂದ ಉದ್ಯೋಗಳಿಗೆ ಭವಿಷ್ಯದಲ್ಲಿ ಆರ್ಥಿಕ ಭದ್ರತೆ: ಪ್ರತೀಕ್ ಬಾಯಲ್

    06/12/2025

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d