ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮೊದಲ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.
ಮಾಚ್.18ರಂದು ದುಬೈನಿಂದ ಬಂದಿದ್ದ 34 ವರ್ಷ ವಯಸ್ಸಿನ ವ್ಯಕ್ತಿಯೋರ್ವರು ಜ್ವರದ ಕಾರಣ ಮಾರ್ಚ್ 23ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಇವರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದ್ದು, ಪ್ರಾಥಮಿಕ ವರದಿಯಲ್ಲಿ ಕೊರೋನಾ ಪಾಸಿಟಿವ್ ಇರುವುದು ಪತ್ತೆಯಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ.