ಉಡುಪಿ ಡಾ. ಟಿ.ಎಂ.ಎ ಪೈ ಆಸ್ಪತ್ರೆ ಕೋವಿಡ್ -19 ಚಿಕಿತ್ಸೆಗೆ ಮೀಸಲು

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಕಂಡುಬರುವ ಕೊರೋನಾ ಪಾಸಿಟಿವ್ ಪ್ರಕರಣದ ರೋಗಿಗಳಿಗೆ ಚಿಕಿತ್ಸೆ ನೀಡಲು, ಉಡುಪಿ ನಗರದಲ್ಲಿರುವ ಡಾ. ಟಿಎಂಎ ಪೈ ಆಸ್ಪತ್ರೆಯನ್ನು ಮೀಸಲಿಡಲಾಗಿದೆ ಎಂದು ಮಾಹೆಯ ಸಹ ಕುಲಾಧಿಪತಿ ಡಾ.ಹೆಚ್.ಎಸ್. ಬಲ್ಲಾಳ್ ಮತ್ತು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

Call us

Click Here

ಅವರು ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಂದಲ್ಲಿ ನಡದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಉಡುಪಿ ಡಾ.ಟಿಎಂಎ ಪೈ ಆಸ್ಪತ್ರೆ:
ಆಸ್ಪತ್ರೆಯು 100 ಹಾಸಿಗೆಗಳ ಅಸ್ಪತ್ರೆಯಾಗಿದ್ದು, 11 ಐಸಿಯು ಹಾಸಿಗೆಗಳು, 15 ಎಚ್.ಡಿ.ಯು ಹಾಸಿಗೆಗಳು, 36 ಖಾಸಗಿ ಕೊಠಡಿಗಳಿದ್ದು ಇವುಗಳನ್ನು ಐಸೋಲೇಶನ್ ಉದ್ದೇಶಕ್ಕಾಗಿ ಬಳಸಲಾಗುವುದು, ಜೊತೆಗೆ 43 ಸಾಮಾನ್ಯ ಹಾಸಿಗೆಗಳು ಸಹ ಲಭ್ಯವಿದ್ದು , ಕಸ್ತೂರ್ಬಾ ಆಸ್ಪತ್ರೆ ಹಾಗೂ ಡಾ.ಟಿ.ಎಂ.ಎ.ಪೈ ಆಸ್ಪತ್ರೆಯ ವೈದ್ಯರ ತಂಡ, ನರ್ಸಿಂಗ್, ಅರೆ ವೈದ್ಯಕೀಯ ಸಿಬ್ಬಂದಿ ಮತ್ತು ಸಹಾಯಕು ಸಿಬ್ಬಂದಿಗಳ ತಂಡ 24*7 ಕಾರ್ಯ ನಿರ್ವಹಿಸಲಿದ್ದು, ಏಪ್ರಿಲ್ 1 ರಿಂದ ಇದು ಸಂಪೂರ್ಣವಾಗಿ ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡಲು ಮೀಸಲಿಡಲಾಗಿದ್ದು, ಕೋವಿಡ್-19 ಚಿಕಿತ್ಸೆಗೆ ಅಗತ್ಯವಿರುವ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಅಳವಡಿಸಲಾಗಿದ್ದು, ರೋಗಿಗಳ ಆರೈಕೆ ಕುರಿತಂತೆ ಎಲ್ಲಾ ಸಿಬ್ಬಂದಿಗಳಿಗೆ ಅಗತ್ಯ ತರಬೇತಿ ಸಹ ನೀಡಲಾಗಿದೆ, ಪ್ರಸ್ತುತ ಇಲ್ಲಿರುವ ರೋಗಿಗಳನ್ನು ಮಣಿಪಾಲದ ಕೆಎಂಸಿ ಗೆ ಸ್ಥಳಾಂತರಿಸಲಾಗಿದೆ ಎಂದು ಡಾ.ಹೆಚ್.ಎಸ್ .ಬಲ್ಲಾಳ್ ತಿಳಿಸಿದರು.

ಜಿಲ್ಲೆಯಲ್ಲಿ ಈಗಾಗಲೇ 3 ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಪಕ್ಕದ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಸಿಟಿವ್ ಪ್ರಕರಣಗಳು ಕಂಡುಬರುತ್ತಿದ್ದು, ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕಂಡುಬರುವ ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡಲು ಈ ಆಸ್ಪತ್ರೆಯನ್ನು ಬಳಸಲಾಗುವುದು, ಇಲ್ಲಿ ಜಿಲ್ಲೆಯಲ್ಲಿ ಪಾಸಿಟಿವ್ ಬಂದ ರೋಗಿಗಳಿಗೆ ಮಾತ್ರ ಚಿಕಿತ್ಸೆ ನೀಡಲಾಗುವುದು, ಚಿಕಿತ್ಸೆ ಸಂಪೂರ್ಣ ಉಚಿತವಾಗಿದ್ದು, ಕರೋನಾ ರೋಗಿಗಳ ಸಮೀಪ ಸಂಪರ್ಕದಲ್ಲಿನ ವ್ಯಕ್ತಿಗಳಿಗಾಗಿ ಉದ್ಯಾವರದ ಎಸ್.ಡಿ.ಎಂ ಕಾಲೇಜಿನಲ್ಲಿ 150 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ, ಅಗತ್ಯಬಿದ್ದಲ್ಲಿ ಜಿಲ್ಲೆಯಲ್ಲಿನ ಹಾಸ್ಟೆಲ್ ಗಳನ್ನು ಸಹ ಬಳಸಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

Click here

Click here

Click here

Click Here

Call us

Call us

ಕರೋನಾ ಹರಡುವುದನ್ನು ತಡೆಗಟ್ಟಲು ಮತ್ತು ಅದರಿಂದ ಉಂಟಾಗುವ ಸವಾಲುಗಳನ್ನು ಎದುರಿಸಲು ಜಿಲ್ಲಾಡಳಿತದೊಂದಿಗೆ ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ (ಮಾಹೆ) , ತನ್ನ ಇಡೀ ಆಸ್ಪತ್ರೆಯನ್ನು ಮೀಸಲಿಟ್ಟು , ಉಚಿತ ಚಿಕಿತ್ಸೆ ನೀಡಲು ಮುಂದೆ ಬಂದಿರುವುದು ಇಡೀ ರಾಜ್ಯಕ್ಕೆ ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಉಡುಪಿ ಶಾಸಕ ರಘುಪತಿ ಭಟ್, ಜಿಲ್ಲಾ ಪಂಚಾಯತ್ ಸಿಇಓ ಪ್ರೀತಿ ಗೆಹಲೋತ್, ಎಸ್ಪಿ ವಿಷ್ಣುವರ್ಧನ್, ಮಾಹೆಯ ಉಪ ಕುಲಾಧಿಪತಿ ಉಪಸ್ಥಿತರಿದ್ದರು.

 

Leave a Reply