ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಜಿಲ್ಲೆಯ ರಕ್ತನಿಧಿ ಕೇಂದ್ರದಲ್ಲಿ ರಕ್ತದ ಅಭಾವವನ್ನು ನೀಗಿಸುವ ಸಲುವಾಗಿ ಬ್ಲಡ್ ಹೆಲ್ಫ್ ಕೇರ್ ಕರ್ನಾಟಕ ಮತ್ತು ಜಮಾತುಲ್ ಮುಸ್ಲಿಮೀನ್ ಗಂಗೊಳ್ಳಿ ಇವರ ಜಂಟಿ ಆಶ್ರಯಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ರಕ್ತನಿಧಿ ಕೇಂದ್ರ ಕುಂದಾಪುರ ಇದರ ಸಹಯೋಗದೊಂದಿಗೆ ಗಂಗೊಳ್ಳಿಯ ತೌಹೀದ್ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ಜಿಲ್ಲಾಡಳಿತದ ಅನುಮತಿ ಪಡೆದು ಬುಧವಾರ ಆಯೋಜಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ ೫೪ ಮಂದಿ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಕೊರೊನಾ ವೈರಸ್ ಭೀತಿ ಹಿನ್ನಲೆಯಲ್ಲಿ ಜಿಲ್ಲಾಡಳಿತದ ನಿರ್ದೇಶನದಂತೆ ರಕ್ತದಾನಿಗಳಿಗೆ ಕೋವಿಡ್-೧೯ ತಪಾಸಣೆ, ಮುಂಜಾಗ್ರತಾ ಕ್ರಮ ಅನುಸರಿಸಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ನೊಂದಾವಣೆ, ತಪಾಸಣೆ, ರಕ್ತದಾನ ಸಂದರ್ಭಗಳಲ್ಲೂ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗಿತ್ತು.
ಗಂಗೊಳ್ಳಿ ಜಮಾತುಲ್ ಮುಸ್ಲಿಮೀನ್ ಅಧ್ಯಕ್ಷ ಪಿ. ಎಂ. ಹಸೈನಾರ್, ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಭೀಮಾಶಂಕರ ಎಸ್., ಕುಂದಾಪುರ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ನಾಗೇಶ, ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶಬನಾಜ್, ತೌಹೀದ್ ವಿದ್ಯಾಸಂಸ್ಥೆಯ ಟ್ರಸ್ಟಿ ಪಿ. ಎಂ. ಇಕ್ಬಾಲ್, ಜಮಾತುಲ್ ಮುಸ್ಲಿಮೀನ್ ಕಾರ್ಯದರ್ಶಿ ರೆಹಾನ್ ಅಹಮ್ಮದ್, ಜಮಾತುಲ್ ಮುಸ್ಲಿಮೀನ್ ಸಂಸ್ಥೆಯ ಪದಾಧಿಕಾರಿಗಳು, ರಕ್ತನಿಧಿ ಕೇಂದ್ರದ ಸಿಬ್ಬಂದಿಗಳು ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು. /ಕುಂದಾಪ್ರ ಡಾಟ್ ಕಾಂ ಸುದ್ದಿ/
ಇದನ್ನೂ ಓದಿ:
► ರಕ್ತದ ಅಭಾವ ನೀಗಿಸಲು ಗಂಗೊಳ್ಳಿ ಯುವಕರಿಂದ ಸ್ವಯಂಪ್ರೇರಿತ ರಕ್ತದಾನ – https://kundapraa.com/?p=36980 .
► ನಾವುಂದ ಫ್ರೆಂಡ್ಸ್ ನೇತೃತ್ವದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ – https://kundapraa.com/?p=37018 .
► ಬೈಂದೂರು: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ನೇತೃತ್ವದಲ್ಲಿ ರಕ್ತದಾನ ಶಿಬಿರ – https://kundapraa.com/?p=37039 .