ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರೋನಾ ತಡೆಗಟ್ಟುವ ನಿಟ್ಟಿನಲ್ಲಿ ಆಶಾ ಕಾರ್ಯಕರ್ತೆಯರ ಶ್ರಮ ಬಹಳ ಮುಖ್ಯವಾದುದು. ಅವರು ಸೈನಿಕರಂತೆ ಕೆಲಸ ಮಾಡಿದ್ದಾರೆ. ಅವರ ಕಾರ್ಯ ಎಲ್ಲರೂ ಮೆಚ್ಚುವಂತದ್ದು. ಅವರೆನ್ನೆಲ್ಲ ನಾವು ಗೌರವಿಸಬೇಕು. ಹಾಗೇ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳು ಸಿಬ್ಬಂದಿಗಳು ಭಯ ತೊರೆದು ಕೆಲಸ ಮಾಡಿದ್ದಾರೆ. ಅವರೆಲ್ಲ ಅಭಿನಂದನಾರ್ಹರು ಎಂದು ಕಾವ್ರಾಡಿ ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷ ಸದಾನಂದ ಬಳ್ಕೂರು ಹೇಳಿದರು.
ಅವರು ಕಂಡ್ಲೂರು ಪಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಗೆ, ಆಶಾ ಕಾರ್ಯಕರ್ತರುಗಳಿಗೆ ಗೌರವ ಸಲ್ಲಿಸಿ, ಗೌರವಧನ ವಿತರಿಸಿ, ವೈದ್ಯಾಧಿಕಾರಿ ಡಾ| ಲತಾರವರನ್ನು ಸನ್ಮಾನಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ರಾಜು ಪೂಜಾರಿ, ಚಂದ್ರ ಹೆಗ್ಡೆ, ಜಿ. ಸೀತಾರಾಮ ಶೆಟ್ಟಿ, ದೇವಾನಂದ ಶೆಟ್ಟಿ, ಜ್ಯೋತಿ ಪುತ್ರನ್, ಎಂ. ಸುಧಾಕರ ಹೆಗ್ಡೆ, ಭಾಸ್ಕರ ಶೆಟ್ಟಿ, ಕೆ. ಚಂದ್ರ, ರಾಜೇಂದ್ರ ಕುಲಾಲ್, ಸುರೇಶ ಕುಮಾರ್ ಉಪಸ್ಥಿತರಿದ್ದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಲತಾ ನಾಯಕ್ ಸಾಮಾಜಿಕ ಅಂತರ ಕಾಪಾಡಿಕೊಂಡು ಕೊರೋನಾ ತಡೆಗಟ್ಟಬೇಕೆಂದು ಕರೆ ನೀಡಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯರಾಮ ಹೆಗ್ಡೆ ಸ್ವಾಗತಿಸಿ ವಂದಿಸಿದರು. ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರೂಪಿಸಿದರು.