ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ದೇಶದಲ್ಲಿ ಕೊರೋನಾ ಮಹಾಮಾರಿಯನ್ನು ತಡೆಗಟ್ಟುವಲ್ಲಿ ಆರೋಗ್ಯ ಕಾರ್ಯಕರ್ತರು ನಿರಂತರವಾಗಿ ಶ್ರಮಿಸಿದ್ದಾರೆ. ಕಠಿಣ ಸಂದರ್ಭವನ್ನೂ ಎದುರಿಸಿ ಎಲ್ಲರ ಸುರಕ್ಷತೆಗಾಗಿ ಶ್ರಮಿಸುತ್ತಿರುವ ಅವರಿಗೆ ಇಡಿ ಸಮುದಾಯ ಕೃತಜ್ಞವಾಗಿದೆ ಎಂದು ಮರವಂತೆ ಬಡಾಕೆರೆ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ರಾಜು ಪೂಜಾರಿ ಹೇಳಿದರು.
ಅವರು ಮಂಗಳವಾರ ಸಹಕಾರಿ ವ್ಯಾಪ್ತಿಯ ಸಂಘ ಸಂಸ್ಥೆಗಳಿಗೆ ಆಶಾ ಕಾರ್ಯಕರ್ತರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಸಂಘದ ವತಿಯಿಂದ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಿ ಮಾತನಾಡಿದರು.
ಈ ಸಂದರ್ಭ ಸಂಘದ ಉಪಾಧ್ಯಕ್ಷ ಚಂದ್ರಶೀಲ ಶೆಟ್ಟಿ, ಸಂಘದ ನಿರ್ದೇಶಕರುಗಳಾದ ಜಗದೀಶ ಪಿ. ಪೂಜಾರಿ, ನರಸಿಂಹ ದೇವಾಡಿಗ, ಎಂ. ಅಣ್ಣಪ್ಪ ಬಿಲ್ಲವ, ವಾಸು ಪೂಜಾರಿ, ರಾಮಕೃಷ್ಣ ಖಾರ್ವಿ, ನಾರಾಯಣ ಶೆಟ್ಟಿ, ಎಂ. ನಾಗಮ್ಮ, ಸರೋಜಾ ಗಾಣಿಗ, ಪ್ರಕಾಶ ದೇವಾಡಿಗ, ರಾಮ, ಭೋಜ ನಾಯ್ಕ್, ನಿಕಟಪೂರ್ವ ನಿರ್ದೇಶಕ ಎಂ. ವಿನಾಯಕ ರಾವ್, ಕಾರ್ಯನಿರ್ವಹಣಾಧಿಕಾರಿ ಸಂಜೀವ ಮಡಿವಾಳ ಇದ್ದರು.