Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹೊರ ರಾಜ್ಯದಿಂದ ಬಂದಲ್ಲಿ ಸರ್ಕಾರಿ ಕ್ವಾರಂಟೈನ್ ಕಡ್ಡಾಯ, ಅಗತ್ಯ ವಸ್ತು ಖರೀದಿ ಸಮಯ ವಿಸ್ತರಣೆ: ಜಿಲ್ಲಾಧಿಕಾರಿ ಜಿ. ಜಗದೀಶ್
    ಉಡುಪಿ ಜಿಲ್ಲೆ

    ಹೊರ ರಾಜ್ಯದಿಂದ ಬಂದಲ್ಲಿ ಸರ್ಕಾರಿ ಕ್ವಾರಂಟೈನ್ ಕಡ್ಡಾಯ, ಅಗತ್ಯ ವಸ್ತು ಖರೀದಿ ಸಮಯ ವಿಸ್ತರಣೆ: ಜಿಲ್ಲಾಧಿಕಾರಿ ಜಿ. ಜಗದೀಶ್

    Updated:02/05/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಹೊರರಾಜ್ಯದಿಂದ ಜಿಲ್ಲೆಗೆ ಆಗಮಿಸುವವರು ಕಡ್ಡಾಯವಾಗಿ ಸರ್ಕಾರಿ ಕ್ವಾರಂಟೈನ್‌ಗೆ ಒಳಪಡುವ ಷರತ್ತಿನೊಂದಿಗೆ, ಉಡುಪಿ ಜಿಲ್ಲೆ ಪ್ರವೇಶಿಸಲು ಅನುಮತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

    Click Here

    Call us

    Click Here

    ಅವರು ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲೆಗೆ ಅಂತರ್ ಜಿಲ್ಲೆ/ ರಾಜ್ಯದಿಂದ ಜನರನ್ನು ಕರೆತರುವ ಮತ್ತು ಜಿಲ್ಲೆಯಿಂದ ಕಳುಹಿಸಿ ಕೊಡುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ನಾಗರೀಕರ ಆರೋಗ್ಯ ರಕ್ಷಣೆಯ ಉದ್ದೇಶದಿಂದ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಾಗಿದು, ಹೊರರಾಜ್ಯದಿಂದ ಬರುವವರು ಮತ್ತು ಹೊರ ಜಿಲ್ಲೆಯಿಂದ ಬರುವವರು ಕಡ್ಡಾಯವಾಗಿ ಸರ್ಕಾರಿ ಕ್ವಾರಂಟೈನ್‌ಗೆ ಒಳಪಡಬೇಕಾಗುತ್ತದೆ, ಜಿಲ್ಲಾಧಿಕಾರಿಗಳು ಒಪ್ಪಗೆ ಸೂಚಿಸುವವರೆಗೂ ಜಿಲ್ಲೆಯ ಗಡಿಯಲ್ಲಿ, ಹೊರ ರಾಜ್ಯದಿಂದ ಆಗಮಿಸುವ ಯಾವುದೇ ವಾಹನಗಳಿಗೆ ಪ್ರವೇಶ ನೀಡದಂತೆ ಸೂಚಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಹೊರರಾಜ್ಯದಿಂದ ಆಗಮಿಸುವವರನ್ನು ಉಡುಪಿಯ ಎಂಜಿಎಂ ಮೈದಾನದಲ್ಲಿ ವ್ಯೆದ್ಯಕೀಯ ಪರೀಕ್ಷೆಗೆ ಒಳಪಡಿಸಿ ಸಂಬಂದಪಟ್ಟ ತಾಲೂಕು ಕೇಂದ್ರಗಳಿಗೆ ಕಳುಹಿಸಲಾಗುವುದು ಅಲ್ಲಿ ಅವರನ್ನು ಸರ್ಕಾರಿ ಕ್ವಾರಂಟೈನ್‌ಗಾಗಿ ವಿವಿಧ ಹಾಸ್ಟಲ್ ಗಳನ್ನು ನಿಗಧಿಗೊಳಿಸಿದ್ದು, ಹೋಟಲ್‌ಗಳನ್ನು ಸಹ ನಿಗಧಿಗೊಳಿಸಲಾಗಿದೆ, ಹೋಟೆಲ್ ಗಳಲ್ಲಿ ಕ್ವಾರಂಟೈನ್ ಆಗುವವವರು ಹೋಟೆಲ್‌ನ ವೆಚ್ಚವನ್ನು ಸ್ವತಃ ಭರಿಸಬೇಕು, ಇದಕ್ಕಾಗಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿನ ಹಾಸ್ಟೆಲ್ ಗಳು ಮತ್ತು ಹೋಟೆಲ್ ಗಳನ್ನು ಗುರುತಿಸುವಂತೆ ಎಲ್ಲಾ ತಹಸೀಲ್ಧಾರ್‌ಗಳಿಗೆ ಎಂದು ಜಿಲ್ಲಾಧಿಕಾರಿ ಸೂಚಿಸಿದರು.

    ಅಲ್ಲದೇ ಜಿಲ್ಲೆಯ ಪ್ರತೀ ಗ್ರಾಮ ಪಂಚಾಯತ್ ಗಳಲ್ಲಿ ಹೊರರಾಜ್ಯದಿಂದ ಬರುವ ಕನಿಷ್ಠ ೨೫ ಜನರನ್ನು ಕ್ವಾರಂಟೈನ್ ಮಾಡಲು ಬೇಕಾದ ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಎಲ್ಲಾ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

    ದಿನಬಳಕೆ ವಸ್ತು ಖರೀದಿ ಸಮಯ ಮಧ್ಯಾಹ್ನ 1ರ ತನಕ ವಿಸ್ತರಣೆ:
    ಜಿಲ್ಲೆಯಲ್ಲಿ ಪ್ರಸ್ತುತ ದಿನಬಳಕೆ ವಸ್ತು ಖರೀದಿಗೆ ನೀಡಿರುವ ಸಮಯವನ್ನು ಬೆಳಗ್ಗೆ 7 ರಿಂದ ಮಧ್ಯಾಹ್ನ 1 ರ ವರೆಗೆ ವಿಸ್ತರಿಸಲಾಗಿದ್ದು, ಸಂಜೆ 5 ರಿಂದ 7ರ ವರೆಗೆ ಅಂಗಡಿಗಳಲ್ಲಿ ಕೆಲಸ ಮಾಡುವ ನೌಕರರು ಮನೆಗೆ ತೆರಳಲು ಅವಕಾಶ ನೀಡಲಾಗುವುದು. ಜಿಲ್ಲೆಯೊಳಗಿನ ಬಸ್ ಸಂಚಾರವನ್ನು ಇನ್ನೂ ಒಂದು ವಾರದ ಕಾಲ ಆರಂಭಿಸುವುದಿಲ್ಲ, ಸಲೂನ್, ಸ್ಪಾ, ಗಳನ್ನೂ ಸಹ ಇನ್ನೂ ಒಂದು ವಾರ ತೆರೆಯಲು ಅವಕಾಶವಿಲ್ಲ, ರಿಕ್ಷಾಗಳಲ್ಲಿ ಒಬ್ಬ ಗ್ರಾಹಕರನ್ನು ಮಾತ್ರ ಕರೆದೊಯ್ಯಲು ಅವಕಾಶವಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು.

    Click here

    Click here

    Click here

    Click Here

    Call us

    Call us

    ಅಂತರ ಜಿಲ್ಲಾ ಪ್ರವಾಸಕ್ಕೆ ಅನುಮತಿ ಇಲ್ಲವಾಗಿದ್ದು, ವೈದ್ಯಕೀಯ ಕಾರಣ ಹೊರತುಪಡಿಸಿ ಇತರೆ ಕಾರಣಕ್ಕೆ ಪಾಸ್‌ಗಳನ್ನು ನೀಡುವುದಿಲ್ಲ, ಪಾಸ್ ಇಲ್ಲದೇ ಅಕ್ರಮ ಪ್ರವೇಶಿಸವವರನ್ನು ಕಡ್ಡಾಯವಾಗಿ ಸರ್ಕಾರಿ ಕ್ವಾರಂಟೈನ್‌ಗೆ ಒಳಪಡಿಸಲಾಗುವುದು ಎಂದು ಹೇಳಿದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಇದನ್ನೂ ಓದಿ:
    ► ಹೊರ ಜಿಲ್ಲೆ ಸಂಚಾರಕ್ಕಿಲ್ಲ ಅನುಮತಿ, ಅಂತರಾಜ್ಯ ಸಂಚಾರಕ್ಕೆ ಸೇವಾಸಿಂಧುವಿನಲ್ಲಿ ನೊಂದಣಿ ಅಗತ್ಯ – https://kundapraa.com/?p=37276 .

    ಹೊರರಾಜ್ಯಗಳಿಗೆ ತೆರಳಬೇಕಾದವರು ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಿ ಅನುಮತಿ ಪಡೆಯುವಂತೆ ತಿಳಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಹೊರರಾಜ್ಯಗಳಿಗೆ ತೆರಳುವವರನ್ನು ಬೀಡಿನಗುಡ್ಡೆ ಮೈದಾನದಲ್ಲಿ ಪರೀಕ್ಷಿಸಿ, ಅನುಮತಿ ಬಂದ ನಂತರ ಕಳುಹಿಸುವ ವ್ಯವಸ್ಥೆ ಮಾಡಲಾಗುವುದು, ಜಿಲ್ಲೆಯಲ್ಲಿರುವ ವಲಸೆ ಕಾರ್ಮಿಕರನ್ನು ನಾಳೆ ರಾತ್ರಿಯೊಳಗೆ ಕಳುಹಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಎಲ್ಲಾ ತಹಸೀಲ್ದಾರ್‌ಗಳಿಗೆ ಸೂಚಿಸಿದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪಡ್ನೇಕರ್ ಉಪಸ್ಥಿತರಿದ್ದರು.

    ಜಿಲ್ಲೆಯ ಎಲ್ಲಾ ತಾಲೂಕುಗಳು ತಹಸೀಲ್ಧಾರ್‌ಗಳು, ತಾ.ಪಂ ಕಾರ್ಯ ನಿರ್ವಹಣಾಧಿಕಾರಿಗಳು, ಆರೋಗ್ಯ ಇಲಾಖೆ ಮತ್ತು ಇತರೆ ಇಲಖೆಯ ಅಧಿಕರಿಗಳು ಉಪಸ್ಥಿತರಿದ್ದರು. /ಕುಂದಾಪ್ರ ಡಾಟ್ ಕಾಂ ಸುದ್ದಿ/

    ಇದನ್ನೂ ಓದಿ:
    ► ಭಯ ಬೇಡ: ಬೈಂದೂರಿನಲ್ಲಿ ಬೆಳಗಾವಿಯಿಂದ ಬಂದ ವ್ಯಕ್ತಿಗೆ ಕೊರೋನಾ ಸೋಂಕು ಇಲ್ಲ – https://kundapraa.com/?p=37268 .

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    seven + 20 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.