ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ಆನ್ ಲೈನ್ ತರಗತಿಗಳಿಗೆ ಶ್ರೀ ವೆಂಕಟರಮಣ ದೇವ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್‌ನ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಆನ್‌ಲೈನ್ ತರಗತಿಗಳಿಗೆ ಚಾಲನೆ ನೀಡಿದರು.
ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಪ್ರತಿದಿನ ಬೆಳಿಗ್ಗೆ 7:30 ರಿಂದ 10:30 ರವರೆಗೆ ಆನ್‌ಲೈನ್ನಲ್ಲಿ ತರಗತಿಗಳು ನೇರಪ್ರಸಾರಗೊಳ್ಳಲಿದೆ. ಮುಂಬರುವ ದಿನಗಳಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳನ್ನು ನಡೆಸುವ ಬಗ್ಗೆ ತಯಾರಿ ನಡೆಸಿದ್ದು ಬ್ಯಾಂಕಿಂಗ್ ಫೌಂಡೇಷನ್, ಸಿ.ಎ./ಸಿಎಸ್ ಫೌಂಡೇಷನ್ ಕೋರ್ಸಗಳನು ಕೂಡ ಆನ್ಲೈನ್‌ನಲ್ಲಿ ಪರಿಚಯಿಸುವುದಾಗಿ ಕಾಲೇಜಿನ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರು ಮಾಹಿತಿ ನೀಡಿದ್ದಾರೆ.
________________
Need a Website / Mobile App / Bulk SMS / Online Class Help for your Institutions or Business?
Call 9743877358 / Mails us for quotation: samashtimv@gmail.com