ಉಡುಪಿ: ಗುತ್ತಿಗೆ ಆಧಾರದ ಮೇಲೆ ವೈದ್ಯಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರದಲ್ಲಿ, ಸಾರ್ವಜನಿಕ ಆಸ್ಪತ್ರೆಯಲ್ಲಿ ತೆರವು ಇರುವ ೫ ವೈದ್ಯಾಧಿಕಾರಿ ಹುದ್ದೆಗೆ ಎಂ.ಬಿ.ಬಿ.ಎಸ್ ವಿದ್ಯಾರ್ಹತೆಯ ಸಾಮಾನ್ಯ ಕರ್ತವ್ಯದ ವೈದ್ಯಾಧಿಕಾರಿಯವರನ್ನು, ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಅಥವಾ ನೇರ ನೇಮಕಾತಿ ಆಗುವವರೆಗೆ/ಖಾಯಂ ವೈದ್ಯರು ವರ್ಗಾವಣೆಯಿಂದ ಹುದ್ದೆ ಭರ್ತಿಯಾದಲ್ಲಿ (ಯಾವುದು ಮೊದಲೂ ಅಲ್ಲಿಯವರೆಗೆ) ನೇಮಕಾತಿ ಮಾಡಲು ಎಂ.ಬಿ.ಬಿ.ಎಸ್ ವಿದ್ಯಾರ್ಹತೆ ಹೊಂದಿರುವ ವೈದ್ಯರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

Call us

Click Here

ಅರ್ಜಿ ನಮೂನೆಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಕಚೇರಿ, ಅಜ್ಜರಕಾಡು, ಜಿಲ್ಲಾಸ್ಪತ್ರೆ ಆವರಣ, ಉಡುಪಿ ಇಲ್ಲಿಂದ ಪಡೆಯಬಹುದಾಗಿದೆ.

ಅಜಿ ಸಲ್ಲಿಸಲು ಮೇ 21ರ ಸಂಜೆ 5 ಗಂಟೆಯ ಕೊನೆಯ ದಿನಾಂಕವಾಗಿದ್ದು, ಸಂದರ್ಶನ ದಿನಾಂಕದಂದು ಖಾಲಿ ಇರುವ ಹುದ್ದೆಗಳಿಗೆ ಮಾತ್ರ ನೇಮಕಾತಿ ಮಾಡಲಾಗುವುದು. ನೇಮಕಾತಿಗೆ ಸಂಬಂದಿಸಿದ ಮಾಹಿತಿಯನ್ನು , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಉಡುಪಿ ಜಿಲ್ಲೆ ದೂ.ಸಂ.0820-2536650ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Leave a Reply