ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತೋಟದಲ್ಲಿದ್ದ ಬಾವಿಗೆ ಬಿದ್ದ ಜಿಂಕೆಯನ್ನು ಅರಣ್ಯಾಧಿಕಾರಿಗಳು ರಕ್ಷಿಸಿದ ಘಟನೆ ತಾಲೂಕಿನ ಕೋಟೇಶ್ವರ ಸಮೀಪದ ಅಸೋಡು ನಾಯ್ಕರಗುಡ್ಡೆ ಎಂಬಲ್ಲಿ ನಡೆದಿದೆ.
ಖಾಸಗಿ ವ್ಯಕ್ತಿಯೋರ್ವರ ತೋಟದ ಬಾವಿಗೆ ಜಿಂಕೆಯೊಂದು ಬಿದ್ದಿರುವುದು ಗಮನಕ್ಕೆ ಬರುತ್ತಿದ್ದಂತೆಯೇ ಕುಂದಾಪುರ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದ್ದು, ಕೂಡಲೇ ಕಾರ್ಯಪ್ರವೃತ್ತರಾದ ಇಲಾಖಾ ಸಿಬ್ಬಂದಿಗಳು ೪೦ ಅಡಿಗೂ ಅಧಿಕ ಆಳವಿರುವ ಬಾವಿಯಲ್ಲಿದ್ದ ಜಿಂಕೆಯನ್ನು ಮೇಲಕ್ಕೆತ್ತಿ, ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಚೇತರಿಸಿಕೊಂಡ ಜಿಂಕೆ ಮತ್ತೆ ಕಾಡಿನತ್ತ ಓಡಿಹೋಗಿದೆ.
ಕುಂದಾಪುರ ಆರ್.ಎಫ್.ಒ ಪ್ರಭಾಕರ ಕುಲಾಲ್ ಮಾರ್ಗದರ್ಶನದಲ್ಲಿ ಉಪವಲಯ ಅರಣ್ಯಾಧಿಕಾರಿ ಉದಯ್, ಅರಣ್ಯ ರಕ್ಷಕಾರದ ಮಾಲತಿ, ವೀಕ್ಷಕ ಸೋಮಶೇಖರ್ ಹಾಗೂ ಸ್ಥಳಿಯರು ಜಿಂಕೆ ರಕ್ಷಣೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡರು.










