ಭಟ್ಕಳದಲ್ಲಿ ಹೆಚ್ಚಿದ ಕೋರೋನಾ ಸೋಂಕು: ಜಿಲ್ಲೆಯ ಶಿರೂರು ಗಡಿಯಲ್ಲಿ ಕಟ್ಟೆಚ್ಚರ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಗಡಿ ಭಾಗವಾದ ಶಿರೂರು ಚೆಕ್‌ಪೋಸ್ಟ್ ವ್ಯಾಪ್ತಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಪ್ಯಾಸೆಂಜರ್ ಹಾಗೂ ಗೂಡ್ಸ್ ವಾಹನಗಳ ಚಾಲಕ ಹಾಗೂ ಸಹಪ್ರಯಾಣಿಕರಿಗೆ ಥರ್ಮ್‌ಲ್ ಸ್ಕ್ರೀನಿಂಗ್ ಮಾಡಿ, ಜಿಲ್ಲೆಯ ಗಡಿಯೊಳಕ್ಕೆ ಬಿಡಲಾಗುತ್ತಿದೆ. ಹೊರ ರಾಜ್ಯಗಳಿಂದ ಬಂದವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತಿದೆ.

Call us

Click Here

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಿಂದ ಒಳಹಾದಿಯ ಮೂಲಕ ಜನರು ಬರುತ್ತಿದ್ದ ಬಗ್ಗೆ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಎಲ್ಲಾ ಒಳದಾರಿಗಳನ್ನು ಬಂದ್ ಮಾಡಿಸಲಾಗಿದೆ. ಹೊರರಾಜ್ಯದಿಂದ ಜಿಲ್ಲೆಗೆ ಆಗಮಿಸುವ ಜನರಿಗೆ ಕಡ್ಡಾಯವಾಗಿ ಸರಕಾರಿ ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತಿದೆ. ಹೊರಜಿಲ್ಲೆಯಿಂದ ಬರುವವರಿಗೆ ಸೀಲ್ ಹಾಕಬಾರದೆಂದು ಸರಕಾರ ಆದೇಶಿಸಿರುವುದರಿಂದ ಪಾಸ್ ಪಡೆದು ಬರುವವರನ್ನು ಸ್ಕ್ರೀನಿಂಗ್ ಮಾಡಿ ಬಿಡಲಾಗುತ್ತಿದೆ. ಸದ್ಯ ಆವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತಿಲ್ಲ.

ಉಡುಪಿ ಜಿಲ್ಲೆ ಈಗಾಗಲೇ ಗ್ರೀನ್ ಝೋನ್‌ನಲ್ಲಿದ್ದು, ಮುಂದೆಯೂ ಇದನ್ನು ಕಾಪಾಡಿಕೊಂಡು ಹೋಗಲು ಜನರೇ ಎಚ್ಚರಿಕೆ ವಹಿಸಿ, ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಸುರಕ್ಷತಾ ಕ್ರಮಗಳನ್ನು ಪಾಲಿಸುವುದು ಅನಿವಾರ್ಯವಾಗಿದೆ.

ಜಿಲ್ಲೆಯ ಗಡಿಭಾಗವಾದ ಭಟ್ಕಳದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರ ಬಗ್ಗೆ ಜಿಲ್ಲೆಯ ಜನರು ಆತಂಕ ಪಡುವ ಅಗತ್ಯವಿಲ್ಲ. ಗಡಿಯಲ್ಲಿ ಕಟ್ಟುನಿಟ್ಟಿನ ಬಂದೋಬಸ್ತ್ ಮಾಡಲಾಗಿದ್ದು, ಒಳದಾರಿಯಲ್ಲಿಯೂ ಯಾರೂ ಸಂಚರಿದಂತೆ ಎಚ್ಚರಿಕೆ ವಹಿಸಲಾಗಿದೆ.  – ಹರಿರಾಮ್ ಶಂಕರ್, ಎಎಸ್ಪಿ ಕುಂದಾಪುರ

Click here

Click here

Click here

Click Here

Call us

Call us

One thought on “ಭಟ್ಕಳದಲ್ಲಿ ಹೆಚ್ಚಿದ ಕೋರೋನಾ ಸೋಂಕು: ಜಿಲ್ಲೆಯ ಶಿರೂರು ಗಡಿಯಲ್ಲಿ ಕಟ್ಟೆಚ್ಚರ

  1. Oladarigalalli…. Police sibbandhi nemaka thumba avashyaka… Sthaliyara mathugalannu prayanikaru kelalla

Leave a Reply