ಹೊರ ರಾಜ್ಯಗಳಿಗೆ ಪ್ರಯಾಣಿಕರನ್ನು ಕಳುಹಿಸಲು ಯಾವುದೇ ಖಾಸಗಿ ವ್ಯಕ್ತಿಗಳನ್ನು ನೇಮಿಸಿಲ್ಲ: ಜಿಲ್ಲಾಧಿಕಾರಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕೊರೋನಾ ಲಾಕ್ ಡೌನ್ ಸಮಸ್ಯೆಯಿಂದ , ಉಡುಪಿ ಜಿಲ್ಲೆಯಿಂದ ಹೊರರಾಜ್ಯಗಳಿಗೆ ತೆರಳುವ ಪ್ರಯಾಣಿಕರಿಗೆ ಅವರ ರಾಜ್ಯಗಳಿಗೆ ಕಳುಹಿಸಲು ವಾಹನ ಸಂಬಂಧಿತ ವ್ಯವಸ್ಥೆ ಮಾಡಲು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಅಥವಾ ಸರ್ಕಾರ ಯಾವುದೇ ಖಾಸಗಿ ವ್ಯಕ್ತಿಗಳನ್ನು ನೇಮಕ ಮಾಡಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಸ್ಪ?ಪಡಿಸಿದ್ದಾರೆ.

Call us

Click Here

ರಾಜ್ಯ ಸರಕಾರವು ಅಂತರ್ ರಾಜ್ಯ ಪ್ರಯಾಣಿಕರಿಗೆ ಸ್ವ ಊರಿಗೆ ಮರಳಲು ಸಹಾಯವಾಗುವಂತೆ ಸೇವಾ ಸಿಂಧು App ತಯಾರಿಸಿದ್ದು, ಇದರಲ್ಲಿ ಈಗಾಗಲೇ ಹಲವಾರು ಮಂದಿ ಈ App ಮೂಲಕ ನೊಂದಣಿ ಮಾಡಿಕೊಂಡಿರುತ್ತಾರೆ. ಆದರೆ ಕೆಲವು ಮಂದಿ, ಉಡುಪಿ ಜಿಲ್ಲೆಯಿಂದ ಹೊರರಾಜ್ಯಗಳಿಗೆ ತೆರಳುವ ಪ್ರಯಾಣಿಕರಿಗೆ ಅವರ ರಾಜ್ಯಕ್ಕೆ ತೆರಳಲು ಮತ್ತು ಅವರು ಪ್ರಯಾಣದ ವ್ಯವಸ್ಥೆಗಳನ್ನು ಮಾಡುವುದಾಗಿ ತಿಳಿಸಿ ಹಣವನ್ನು ವಸೂಲಿ ಮಾಡುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿರುತ್ತದೆ.

ಉಡುಪಿ ಜಿಲ್ಲೆಯಲ್ಲಿರುವ ಹೊರರಾಜ್ಯದ ಪ್ರಯಾಣಿಕರು ತಮ್ಮ ಸಂಬಂಧಿತ ರಾಜ್ಯಕ್ಕೆ ತೆರಳಲು ಅಗತ್ಯ ಮಾಹಿತಿ ನೀಡಲು ಮತ್ತು ಸಂದೇಹಗಳನ್ನು ಪರಿಹರಿಸಲು , ಜಿಲ್ಲೆಯ ನೋಡಲ್ ಅಧಿಕಾರಿಗಳನ್ನಾಗಿ , ಪ್ರಸನ್ನ ಭಕ್ತ, ಸ್ಥಳೀಯ ಉಪ ಲೆಕ್ಕ ನಿರ್ದೇಶಕರು, ಸ್ಥಳೀಯ ಲೆಕ್ಕಪರಿಶೋಧನಾ ವಲಯ, ಉಡುಪಿ ಮೊ.ಸಂ. 9448983507 ಮತ್ತು ಉಡುಪಿಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ದಯಾನಂದ ಮೊ.ಸಂ. 9448725747 ನೇಮಿಸಿದ್ದು, ಯಾರಾದರೂ ಹಣ ವಸೂಲಿ ಮಾಡಿದಲ್ಲಿ ನೋಡೆಲ್ ಅಧಿಕಾರಿಗಳನ್ನು ಅಥವಾ ಟೋಲ್ ಫ್ರೀ ಸಂಖ್ಯೆ 1077 ಸಂಪರ್ಕಿಸಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದ್ದಾರೆ.

Leave a Reply