Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ದೇಶದಲ್ಲಿ ಪ್ರತಿವರ್ಷ 20 ಲಕ್ಷ ಯೂನಿಟ್ ರಕ್ತ ಕೊರತೆ: ಡಿ.ಎಫ್.ಓ ಆಶೀಶ್ ರೆಡ್ಡಿ
    ಊರ್ಮನೆ ಸಮಾಚಾರ

    ದೇಶದಲ್ಲಿ ಪ್ರತಿವರ್ಷ 20 ಲಕ್ಷ ಯೂನಿಟ್ ರಕ್ತ ಕೊರತೆ: ಡಿ.ಎಫ್.ಓ ಆಶೀಶ್ ರೆಡ್ಡಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಭಾರತದಲ್ಲಿ ಪ್ರತೀ ವರ್ಷ 20 ಲಕ್ಷ ಯೂನಿಟ್ ರಕ್ತದ ಕೊರತೆ ಕಂಡುಬರುತ್ತಿದೆ, ಆದ್ದರಿಂದ ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಬೇಕು ಎಂದು ಕುಂದಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ ತಿಳಿಸಿದ್ದಾರೆ.

    Click Here

    Call us

    Click Here

    ಅವರು ಶನಿವಾರ, ಕರ್ನಾಟಕ ರಾಜ್ಯ ಅರಣ್ಯ ರಕ್ಷಕ ಮತ್ತು ವೀಕ್ಷಕರ ಸಂಘ, ಕುಂದಾಪುರ ಪ್ರಾದೇಶಿಕ ಹಾಗೂ ಕುದುರೆಮುಖ ವನ್ಯಜೀವಿ ವಿಭಾಗ, ರಕ್ತನಿಧಿ ಕೇಂದ್ರ, ಜಿಲ್ಲಾ ಸರಕಾರಿ ಆಸ್ಪತ್ರೆ ಉಡುಪಿ ಸಹಯೋಗದಲ್ಲಿ, ಉಡುಪಿಯ ಪುರಭವನದ ಬಳಿ ಗ್ರಂಥಾಲಯ ಕಟ್ಟಡದಲ್ಲಿ ನಡೆದ ರಕ್ತದಾನ ಶಿಬಿರ ಉದ್ಘಾಟಿಸಿ, ಶಿಬಿರದಲ್ಲಿ ಸ್ವಯಂ ರಕ್ತದಾನ ಮಾಡಿ ಮಾತನಾಡಿದರು.

    ದೇಶದಾದ್ಯಂತ ಲಾಕ್‌ಡೌನ್ ಅವಧಿಯಲ್ಲಿ ರಕ್ತದ ಕೊರತೆ ಅಧಿಕವಾಗಿದ್ದು, ಇಂತಹ ಸಮಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನಿಗಳು ರಕ್ತದಾನ ಮಾಡುವಂತೆ ತಿಳಿಸಿದ ಡಿಎಫ್‌ಓ ಆಶೀಶ್ ರೆಡ್ಡಿ ಅವರು, ರಕ್ತದಾನದಿಂದ ಮತ್ತೊಬ್ಬರ ಜೀವ ಉಳಿಸುವ ಜೊತೆಗೆ, ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಅಧಿಕವಾಗುತ್ತದೆ, ಸಮಾಜಕ್ಕೆ ಸೇವೆ ಸಲ್ಲಿಸಿದ ಆತ್ಮ ತೃಪ್ತಿ ದೊರೆಯುತ್ತದೆ , ವಿರಳ ರಕ್ತದ ಗುಂಪುಗಳಾಗಿ ಒಂದಾಗಿರುವ ಬಿ ನೆಗೆಟಿವ್ ರಕ್ತ ಹೊಂದಿರುವ ತಾನು, ಈ ಹಿಂದೆ ತುರ್ತು ಚಿಕಿತ್ಸೆಗೆ ಅಗತ್ಯವಿದ್ದ ರೋಗಿಯೊಬ್ಬರಿಗೆ ರಕ್ತ ನೀಡಿದ್ದು, ಇಂದು ಸ್ವಯಂ ಪ್ರೇರಿತವಾಗಿ ನೀಡುತ್ತಿದ್ದೇನೆ ಎಂದ ಅವರು ಸ್ವತಃ ರಕ್ತದಾನ ಮಾಡಿ ಮಾದರಿಯಾದರು.

    ಕರ್ನಾಟಕ ರಾಜ್ಯ ಅರಣ್ಯ ರಕ್ಷಕ ಮತ್ತು ವೀಕ್ಷಕರ ಸಂಘ ಉಡುಪಿ ಘಟಕದ ಅಧ್ಯಕ್ಷ ಮುಂಜುನಾಥ ನ್ಯಾಕ್ ಮಾತನಾಡಿ, ಕೋವಿಡ್ ೧೯ ಪ್ರಯುಕ್ತದ ಲಾಕ್‌ಡೌನ್ ನಿಂದ ರಕ್ತದ ಕೊರತೆಯಿರುವುದನ್ನು ಅರಿತು ಸಂಘದ ವತಿಯಿಂದ ತುರ್ತಾಗಿ ರಕ್ತದಾನ ಶಿಬಿರ ಆಯೋಜಿಸಿದ್ದು, ಸಂಘದವತಿಯಿಂದ ರೂ.66,666 ಗಳನ್ನು ಮುಖ್ಯಮಂತ್ರಿಗಳ ಕೋವಿಡ್-19 ಪರಿಹಾರ ನಿಧಿಗೆ ನೀಡಲಾಗುವುದು ಎಂದು ಹೇಳಿದರು.

    ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್, ಉಡುಪಿ ವಲಯ ಅರಣ್ಯಾಧಿಕಾರಿ ಕ್ಲಿಫರ್ಡ್ ಲೋಬೋ, ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಕಿರಣ್ ಹೆಗ್ಡೆ, ಕರ್ನಾಟಕ ರಾಜ್ಯ ಅರಣ್ಯ ರಕ್ಷಕ ಮತ್ತು ವೀಕ್ಷಕರ ಸಂಘ ಉಡುಪಿ ಘಟಕದ ಖಜಾಂಚಿ ಅಭಿಲಾಷ್, ದೇವರಾಜ್ ಪಾಣ ಮತ್ತಿತರರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಕೇಶವ ಪೂಜಾರಿ ನಿರೂಪಿಸಿ, ವಂದಿಸಿದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    1 × 4 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.