ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಭಾನುವಾರ ಸಂಪೂರ್ಣ ಲಾಕ್‌ಡೌನ್ ಇರಲಿದ್ದು, ಶನಿವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 7 ಗಂಟೆಯ ತನಕ ರಾಜ್ಯ ಸರಕಾರ ಆದೇಶದಂತೆ ಸಂಪೂರ್ಣ ಲಾಕ್‌ಡೌನ್ ಜಾರಿಯಾಗಲಿದೆ. ಈ ವೇಳೆ ಅನಾವಶ್ಯಕವಾಗಿ ರಸ್ತೆಯಲ್ಲಿ ತಿರುಗಾಡಿದರೆ ನಾವು ಮಾತನಾಡಲ್ಲ ಬದಲಾಗಿ ಲಾಠಿ ಮಾತನಾಡಲಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಎಚ್ಚರಿಕೆ ನೀಡಿದ್ದಾರೆ.
ಉಡುಪಿಯಲ್ಲಿ ಜಿಪಂ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ ಈ ಅವಧಿಯಲ್ಲಿ ಅಗತ್ಯ ವಸ್ತುಗಳಾದ ಪತ್ರಿಕೆ, ಹಾಲು, ಔಷಧ ಪೂರೈಕೆ/ಖರೀದಿಗೆ ಯಾವುದೇ ನಿರ್ಬಂಧವಿರುವುದಿಲ್ಲ. ಆದರೆ ಇತರ ಎಲ್ಲಾ ಅಂಗಡಿ ಮುಂಗಟ್ಟುಗಳು, ಹೊಟೇಲ್ಗಳು ಮುಚ್ಚಲ್ಪಡಲಿದೆ. ಅಲ್ಲದೆ ಎಲ್ಲಾ ಖಾಸಗಿ ಹಾಗೂ ಸಾರ್ವಜನಿಕ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದರು.
***
ಲಾಕ್‌ಡೌನ್ ಸಡಿಲ ಮಾಡಲಾಗುತ್ತಿದ್ದರೂ ಕೊರೊನಾ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಭಾನುವಾರ ನಿರ್ಬಂಧ ಮುಂದುವರಿಯಲಿದೆ ಎಂದು ರಾಜ್ಯ ಸರ್ಕಾರ ಹೇಳಿತ್ತು. ಪೂರ್ವ ನಿಗದಿತ ಮದುವೆ ಸಮಾರಂಭಗಳನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಲಾಗಿದೆ. ಅಂತರ ಕಾಯ್ದುಕೊಂಡು ಗರಿಷ್ಠ 50 ಅತಿಥಿಗಳ ಸಂಖ್ಯೆ ಮೀರದಂತೆ ಸರಳವಾಗಿ ಮದುವೆ ಮಾಡಲು ಅನುಮತಿ ನೀಡಲಾಗಿದೆ’ ಎಂದು ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್‌ಕುಮಾರ್ ತಿಳಿಸಿದ್ದರು./
ಏನೇನು ಇರುತ್ತೆ:
* ಆಸ್ಪತ್ರೆಗಳು, ಮೆಡಿಕಲ್ ಸ್ಟೋರ್ಸ್, ಫಾರ್ಮಸಿ ಗಳಿಗೆ ಅವಕಾಶ
* ಡಾಕ್ಟರ್ಸ್, ನರ್ಸ್, ಆಂಬುಲೆನ್ಸ್, ಮಾಧ್ಯಮಗಳು ಓಡಾಟಕ್ಕೆ ಅವಕಾಶ
* ಡಯಾಲಿಸಿಸ್, ಅನಾರೋಗ್ಯ ಸಮಸ್ಯೆ ಇದ್ದವರು ಆಸ್ಪತ್ರೆಗೆ ತೆರಳಲು ಅನುಮತಿ
* ಗರ್ಭಿಣಿ ಸ್ತ್ರೀಯರು ಆಸ್ಪತ್ರೆಗೆ ತೆರಳಲು ಅನುಮತಿ
* ಮದುವೆ ಸಮಾರಂಭಗಳಿಗೆ ಷರತ್ತಿನ ಅನುಮತಿ
ಏನೆಲ್ಲಾ ಇರಲ್ಲ:
* ಸಾರ್ವಜನಿಕ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ
* ಬಸ್ ಸಂಚಾರ ಇರಲ್ಲ
* ಅಗತ್ಯ ವಸ್ತುಗಳನ್ನ ಹೊರತು ಪಡಿಸಿ, ಉಳಿದ ಅಂಗಡಿ ಮುಂಗಟ್ಟುಗಳು ಬಂದ್
* ನಗರದ ಪ್ರಮುಖ ರಸ್ತೆಗಳು ಬ್ಯಾರಿಕೆಡ್‍ನಿಂದ ಕ್ಲೋಸ್
* ಬ್ಯೂಟಿ ಪಾರ್ಲರ್, ಸಲೂನ್, ಸ್ಪಾ, ಬಟ್ಟೆ ಅಂಗಡಿ, ಚಪ್ಪಲಿ ಅಂಗಡಿ ಮುಂಗಟ್ಟುಗಳು ಬಂದ್.
* ಗಾರ್ಮೆಂಟ್ಸ್ ಫ್ಯಾಕ್ಟರಿ ಸೇರಿದಂತೆ ಎಲ್ಲಾ ಕಾರ್ಖಾನೆಗಳು ಲಾಕ್
* ಖಾಸಗಿ ಕಂಪನಿಗಳೂ ಕೂಡ ಬಂದ್
* ಎಲ್ಲಾ ಪಾರ್ಕ್ ಗಳಿಗೂ ಬೀಗ ಬೀಳಲಿದ್ದು, ಜಾಗಿಂಗ್ ವಾಕಿಂಗ್ ಗೆ ಪರ್ಮೀಷನ್ ಇಲ್ಲ.
* ಚಿನ್ನದ ಅಂಗಡಿಗಳು ಕೂಡ ಕ್ಲೋಸ್ ಆಗಲಿವೆ
* ಆಟೋ, ಟ್ಯಾಕ್ಸಿ ಕ್ಯಾಬ್ ಗಳು ರಸ್ತೆಗೆ ಇಳಿಯುವಂತಿಲ್ಲ
* ಖಾಸಗಿ ವಾಹನ ಬಳಸಿ ಓಡಾಡುವ ಹಾಗಿಲ್ಲ
* ಬೇರೆ ಜಿಲ್ಲೆಗೆ ಹೋಗಲು ಅವಕಾಶವಿಲ್ಲ /ಕುಂದಾಪ್ರ ಡಾಟ್ ಕಾಂ/
ಇದನ್ನೂ ಓದಿ:
► ಕರೆ ಮಾಡಿ ಬೆದರಿಕೆ ಹಾಕುವ ಕಿಡಿಗೇಡಿಗಳಿಗೆ ಕಾನೂನು ಕ್ರಮ – https://kundapraa.com/?p=37789 .
► ಕುಂದಾಪುರ ವಿಧಾನಸಭೆ ಕ್ಷೇತ್ರದ ಕ್ವಾರಂಟೈನ್ ಮಾಹಿತಿ-ದೂರಿಗಾಗಿ ಕಂಟ್ರೋಲ್ ರೂಂ – https://kundapraa.com/?p=37760 .
► ಕುಂದಾಪುರದಲ್ಲಿ120 ಬೆಡ್‌ಗಳ ಕೋವಿಡ್-19 ಆಸ್ಪತ್ರೆ ಸಜ್ಜು – https://kundapraa.com/?p=37752 .