Kundapra.com ಕುಂದಾಪ್ರ ಡಾಟ್ ಕಾಂ

ಶಂಕರನಾರಾಯಣ ಪೊಲೀಸ್ ಠಾಣೆಯ ಸಿಬ್ಬಂದಿಗೆ ಕೊರೋನಾ ಶಂಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಶಂಕರನಾರಾಯಣ,ಮೇ31: ಕುಂದಾಪುರ ತಾಲೂಕಿನ ಶಂಕರನಾರಾಯಣ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಓರ್ವರಿಗೆ ಕೋರೋನಾ ಪಾಸಿಟಿವ್ ಇರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಸದ್ಯ ಅವರನ್ನು ವೈದ್ಯಕೀಯ ನಿಗಾದಲ್ಲಿರಿಸಲಾಗಿದೆ.

ಜಿಲ್ಲೆಯ ಪೊಲೀಸ್ ಸಿಬ್ಬಂದಿಗಳಿಗೆ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದ್ದು, ಅದರಂತೆ ಶಂಕರನಾರಾಯಣ ಠಾಣೆಯ ಮಹಿಳಾ ಸಿಬ್ಬಂದಿಯ ವರದಿಯೂ ಪಾಸಿಟಿವ್ ಬಂದಿತ್ತು. ಆದರೆ ಅವರು ಲಾಕ್‌ಡೌನ್ ಸಮಯದಲ್ಲಿ ಯಾವುದೇ ಚೆಕ್‌ಪೋಸ್ಟ್‌ನಲ್ಲಿ ಕೆಲಸ ನಿರ್ವಹಿಸಿಲ್ಲ ಅಲ್ಲದೇ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲ. ಠಾಣೆಯಲ್ಲಿ ಮಾತ್ರ ಕಾರ್ಯನಿರ್ವಹಿಸಿದ್ದರು ಎಂದು ತಿಳಿದುಬಂದಿದೆ. ಆದಾಗ್ಯೂ ಅವರಿಗೆ ಕೋರೋನಾ ಲಕ್ಷಣಗಳು ಕಂಡುಬಂದಿರುವ ಬಗ್ಗೆ ಸಂಶಯ ವ್ಯಕ್ತವಾಗಿದೆ. ಸೋಮವಾರ ಪುನಃ ಅವರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗುತ್ತಿದ್ದು, ಸಂಜೆ ವರದಿ ಕೈ ಸೇರುವ ಸಾಧ್ಯತೆ ಇದೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

ಕೋವಿಡ್ ಫಾಲ್ಸ್ ಪಾಸಿಟಿವ್ ಬಂದಿರುವ ಸಾಧ್ಯತೆ ಇರುವುದರಿಂದ ಸೋಮವಾರ ಪುನಃ ಸಿಬ್ಬಂದಿಯ ಸ್ವ್ಯಾಬ್ ಪರೀಕ್ಷೆಗೆ ಕಳುಹಿಸಲಾಗುತ್ತದೆ. ಕೋವಿಡ್ ವರದಿ ದೊರೆಯುವ ತನಕವೂ, ಠಾಣೆಯನ್ನು ಸೀಲ್‌ಡೌನ್ ಮಾಡಲಾಗುವುದಿಲ್ಲ. ಆದರೆ ಸುರಕ್ಷತಾ ಕ್ರಮವಾಗಿ ನಾಳೆ ಸ್ಯಾನಿಟೈನ್ ಮಾಡಲಾಗುವುದು. ವರದಿ ನೆಗೆಟಿವ್ ಬಂದರೆ ಎಂದಿನಂತೆ ಕಾರ್ಯಾರಂಭ ಮಾಡಲಾಗುವುದು ಎಂದು ಕುಂದಾಪುರ ಎಎಎಸ್ಪಿ ಹರಿರಾಂ ಶಂಕರ್ ಸ್ಪಷ್ಟಪಡಿಸಿದ್ದಾರೆ /ಕುಂದಾಪ್ರ ಡಾಟ್ ಕಾಂ ಸುದ್ದಿ/

ಇದನ್ನೂ ಓದಿ:
► ಹೆಂಗವಳ್ಳಿ: ಸಿಡಿಲು ಬಡಿದು 2 ದನ 1 ಕರು ಸಾವು – https://kundapraa.com/?p=38093 .
► ಉಡುಪಿ ಜಿಲ್ಲೆಯಲ್ಲಿ ಭಾನುವಾರ 10 ಕೊರೋನಾ ಪಾಸಿಟಿವ್ – https://kundapraa.com/?p=38083 .
► ಕುಂದಾಪುರ: ಕೋವಿಡ್-19 ಆಸ್ಪತ್ರೆಯಿಂದ ಗುಣಮುಖರಾದ 14 ಮಂದಿ ಬಿಡುಗಡೆ – https://kundapraa.com/?p=38077 .
► ಜಿಲ್ಲೆಯಲ್ಲಿ ಮೂರು ದಿನ ಭಾರಿ ಮಳೆ: ಸಾರ್ವಜನಿಕರಿಗೆ ಸೂಚನೆ – https://kundapraa.com/?p=38020 .
► ಜೂನ್ 15ರಿಂದ ಮೀನುಗಾರಿಕೆ ನಿಷೇಧ: ಪರಿಷ್ಕೃತ ಆದೇಶ – https://kundapraa.com/?p=38016 .

Exit mobile version