ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉಡುಪಿ ಜಿಲ್ಲಾ ಸಂಸ್ಥೆಯ ವತಿಯಿಂದ ಉಡುಪಿ ಜಿಲ್ಲೆಯಲ್ಲಿ ನಡೆಯುವ ಹತ್ತನೇ ತರಗತಿಯ ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಮಾಸ್ಕ್ ವಿತರಿಸುವ ಕಾರ್ಯಕ್ರಮ ಇತ್ತೀಚೆಗೆ ರಜತಾದ್ರಿಯಲ್ಲಿ ನಡೆಯಿತು.
ಉಡುಪಿ ಜಿಲ್ಲಾ ಸ್ಕೌಟ್ ಆಯುಕ್ತ ಡಾ. ವಿಜಯೇಂದ್ರ ವಸಂತ್ , ಹದಿನೈದು ಸಾವಿರ ಮಾಸ್ಕ್ ಗಳನ್ನು ಉಡುಪಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು ಮತ್ತು ಉಡುಪಿಯ ಡಿಡಿಪಿಐ ಶೇಷಶಯನ ಕಾರಂಜ ಅವರಿಗೆ ಹಸ್ತಾಂತರಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಡಾ. ವಿಜಯೇಂದ್ರ ವಸಂತ್, ರಾಜ್ಯದಲ್ಲಿ ಒಂದು ಕೋಟಿ ಮಾಸ್ಕ್ ಸಿದ್ಧವಾಗಿದ್ದು , ಉಡುಪಿ ಜಿಲ್ಲೆಯಲ್ಲಿ ಉಡುಪಿ ಜಿಲ್ಲಾ ಸಂಸ್ಥೆ ಹಾಗೂ ಬೈಂದೂರು,ಕುಂದಾಪುರ, ಬ್ರಹ್ಮಾವರ, ಕಲ್ಯಾಣಪುರ, ಉಡುಪಿ, ಕಾರ್ಕಳ ಹಾಗೂ ಕಾಪು ಸ್ಥಳೀಯ ಸಂಸ್ಥೆಯ ಪದಾಧಿಕಾರಿಗಳು, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು, ಶಿಕ್ಷಕರು, ಮತ್ತು ಹೆತ್ತವರ ಸಹಕಾರದಿಂದ ಒಂದೂವರೆ ಲಕ್ಷ ಮಾಸ್ಕ್ ತಯಾರಿಸಿ ವಿತರಿಸುವಂತಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅದರ ಅಂಗವಾಗಿ ಹದಿನೈದು ಸಾವಿರ ಮಾಸ್ಕ್ ಉಡುಪಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಿಗೆ ಹಸ್ತಾಂತರಿಸಲಾಗಿದ್ದು, ಅಲ್ಲದೆ ಹತ್ತನೇ ತರಗತಿ ಪರೀಕ್ಷೆ ಕೇಂದ್ರಗಳಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ವಯಂಸೇವಕರು ಸಹಕರಿಸಲಿದ್ದಾರೆ ಎಂದು ಹೇಳಿದರು
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉಡುಪಿ ಜಿಲ್ಲಾ ಸಂಸ್ಥೆಯ ಮತ್ತು ಸ್ಥಳೀಯ ಸಂಸ್ಥೆಯ ಪದಾಧಿಕಾರಿಗಳಾದ ಐಕೆ ಜಯಚಂದ್ರ, ಡಾ. ಜಯರಾಮ್ ಶೆಟ್ಟಿಗಾರ್,ಉಮೇಶ್ ಪೈ, ಗುಣರತ್ನ, ಫ಼್ಲೋರಿನ್, ರೇಖಾಯು, ಅನಿತಾ ಮೆಂಡೋನ್ಸಾ, ಭಾರತಿ ಚಂದ್ರಶೇಖರ್, ನಿತಿನ್ ಅಮಿನ್, ಸುಮನ್ ಶೇಖರ್, ಶಿಕ್ಷಣಾಧಿಕಾರಿಗಳಾದ ಅಶೋಕ್ ಕಾಮತ್, ಒ ಆರ್ ಪ್ರಕಾಶ್, ಜ್ಯೋತಿ.ಬಿ, ಶಶಿಧರ್, ಮಂಜುಳಾ ಕೆ, ಉಪಸ್ಥಿತರಿದ್ದರು.