ಗಂಗೊಳ್ಳಿ ಗ್ರಾಮದ ವೆಂಕಿಮನೆ ಪ್ರದೇಶ ಸೀಲ್‌ಡೌನ್

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಕ್ವಾರಂಟೈನ್ ಮುಗಿಸಿದ ಬಳಿಕ ಸರಕಾರದ ಆದೇಶದ ಹಿನ್ನಲೆ ಮನೆಗೆ ಬಂದ ಗಂಗೊಳ್ಳಿ ಗ್ರಾಮದ ಮಹಿಳೆಯೋರ್ವಳಿಗೆ ಕೋವಿಡ್-೧೯ ಸೋಂಕು ದೃಢಪಟ್ಟಿದ್ದು, ಗಂಗೊಳ್ಳಿ ಗ್ರಾಮದ ವೆಂಕಿಮನೆ ಪ್ರದೇಶವನ್ನು ಗುರುವಾರ ಸೀಲ್‌ಡೌನ್ ಮಾಡಲಾಗಿದೆ.

Call us

Click Here

ಗಂಗೊಳ್ಳಿ ಗ್ರಾಮದ ವೆಂಕಿಮನೆ ಸಮೀಪದ ಮನೆಗೆ ಮಹಾರಾಷ್ಟ್ರದಿಂದ ಆಗಮಿಸಿದ ವ್ಯಕ್ತಿಗೆ ವರದಿಯು ಪಾಸಿಟಿವ್ ಬಂದಿದ್ದು ಇದೀಗ ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವೆಂಕಿಮನೆ ಸಮೀಪದ ೧೦೦ ಮೀಟರ್ ವ್ಯಾಪ್ತಿಯ ಎಂಟು ಮನೆಗಳನ್ನು ಸೀಲ್ ಡೌನ್ ಮಾಡಲಾಗಿದ್ದು, ಈ ಪ್ರದೇಶವನ್ನು ಕಂಟೈನ್‌ಮೆಂಟ್ ಜೋನ್ ಎಂದು ಘೋಷಿಸಲಾಗಿದೆ.

ಸ್ಥಳಕ್ಕೆ ಭೇಟಿ ನೀಡಿದ ಗಂಗೊಳ್ಳಿ ಗ್ರಾಮ ಕರಣಿಕ ರಾಘವೇಂದ್ರ ಡಿ. ಅವರು ಕಂಟೈನ್‌ಮೆಂಟ್ ಪ್ರದೇಶದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಸೀಲ್ ಡೌನ್ ಮಾಡಿದ ಸ್ಥಳಕ್ಕೆ ಯಾರೂ ಪ್ರವೇಶಿಸುವಂತಿಲ್ಲ ಮತ್ತು ಮನೆಯವರು ಯಾರು ಹೊರಗೆ ಬರುವಂತಿಲ್ಲ ಎಂದು ಸೂಚನೆ ನೀಡಿದರು.

ಗ್ರಾಪಂ ಉಪಾಧ್ಯಕ್ಷೆ ಪ್ರೇಮಾ ಸಿ.ಎಸ್.ಪೂಜಾರಿ, ಪಿಡಿಒ ಚಂದ್ರಶೇಖರ, ಕಾರ್ಯದರ್ಶಿ ದಿನೇಶ ಶೇರುಗಾರ್, ಟಾಸ್ಕ್‌ಪೋರ್ಸ್ ಸದಸ್ಯ ಬಿ.ರಾಘವೇಂದ್ರ ಪೈ, ಕಿರಿಯ ಆರೋಗ್ಯ ಸಹಾಯಕಿ ಪ್ರಜ್ವಲಾ, ಅಂಗನವಾಡಿ ಕಾರ್ಯಕರ್ತೆ ಫಿಲೋಮಿನಾ ಫೆರ್ನಾಂಡಿಸ್, ಪೊಲೀಸ್ ಸಿಬ್ಬಂದಿ ಸಂಪತ್, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಇದನ್ನೂ ಓದಿ:
► ಕುಂದಾಪುರ ತಾಲೂಕಿನ 24, ಬೈಂದೂರು ತಾಲೂಕಿನ 15 ಕಡೆಗಳಲ್ಲಿ ಸೀಲ್‌ಡೌನ್ – https://kundapraa.com/?p=38263 .

Click here

Click here

Click here

Click Here

Call us

Call us

Leave a Reply