ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕೇಂದ್ರ ಸರ್ಕಾರದ ಆದೇಶದಂತೆ ಉಡುಪಿ ಜಿಲ್ಲೆಯ ಎಲ್ಲಾ ದೇವಸ್ಥಾನಗಳನ್ನು ಜೂನ್ 8 ರಿಂದ ತೆರೆಯಲಾಗುವುದು, ಕೋವಿಡ್-19 ಹರಡುವುದನ್ನು ತಡೆಗಟ್ಟುವ ಸಲುವಾಗಿ ಭಕ್ತಾಧಿಗಳು ಮತ್ತು ಸಾರ್ವಜನಿಕರು ಈ ಮುಂದಿನ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ತಿಳಿಸಿದ್ದಾರೆ.
- ದೇವಾಲಯಕ್ಕೆ ಬರುವವರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು. ಮಾಸ್ಕ್ ಇಲ್ಲದೇ ಇರುವವರು ದೇವಸ್ಥಾನದ ಪ್ರವೇಶಕ್ಕೆ ಅವಕಾಶವಿರುವುದಿಲ್ಲ.
- ಥರ್ಮಲ್ ಸ್ಕ್ಯಾನಿಂಗ್ ಪರೀಕ್ಷೆಗೆ ಒಳಪಡಿಸಲಾಗುವುದು ಮತ್ತು ನೀಡಲಾದ ಸ್ಯಾನಿಟೈಸರ್ ಬಳಸುವುದು.
- ದೇವಸ್ಥಾನದ ಎದುರುಗಡೆ ಆಳವಡಿಸಿರುವ ನಲ್ಲಿ (ಸೋಪ್/ಹ್ಯಾಂಡ್ ವಾಷ್) ಯಲ್ಲಿ ಕೈ ತೊಳೆದುಕೊಂಡು ದೇವಾಲಯಕ್ಕೆ ಪ್ರವೇಶಿಸುವುದು.
- ದೇವಾಲಯದ ಒಳಗೆ ಮತ್ತು ಜೊತೆಗೆ (6 ಅಡಿ) ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು,
- ಉಸಿರಾಟದ ತೊಂದರೆ ಜ್ವರ, ಕೆಮ್ಮು, ನೆಗಡಿ ಅಂತಹ ರೋಗ ಲಕ್ಷಣಗಳನ್ನು ಹೊಂದಿರುವವರು ದೇವಾಲಯದ ಪ್ರದೇಶಕ್ಕೆ ಬರುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ.
- ಸ್ಮಾರ್ಟ್ ಫೋನ್ ಹೊಂದಿರುವವರು ಕಡ್ಡಾಯವಾಗಿ ಆರೋಗ್ಯ ಸೇತು ಆಪ್ ಅಳವಡಿಸಿಕೊಳ್ಳುವುದು.
- ದೇವರ ದರ್ಶನಕ್ಕೆ ಮಾತ್ರ ಅವಕಾಶವಿದ್ದು, ದರ್ಶನಕ್ಕೆ ಬರುವವರು ಹೂ, ಹಣ್ಣು, ಕಾಯಿ ಮುಂತಾದ ಪೂಜಾ ಸಾಮಗ್ರಿಗಳನ್ನು ತರಬಾರದು. ಕರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ಸೇವೆಗಳಿಗೆ ಅವಕಾಶವಿರುವುದಿಲ್ಲ.
- 65 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಕರಿಗೆ ಹಾಗೂ 10 ವರ್ಷ ಕೆಳಗಿನ ಮಕ್ಕಳು ಮತ್ತು ಗರ್ಭಿಣಿಯರು ಪ್ರವೇಶ ಮಾಡಬಾರದು.
- ಭಕ್ತಾದಿಗಳು ಪಾದರಕ್ಷೆಯನ್ನು ತಮ್ಮ ವಾಹನದಲ್ಲೇ ಬಿಟ್ಟು ಬರುವುದು, ದೇವಸ್ಥಾನದ ಆವರಣದಲ್ಲಿ ಉಗುಳುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ/ಕುಂದಾಪ್ರ ಡಾಟ್ ಕಾಂ ಸುದ್ದಿ/
ಇದನ್ನೂ ಓದಿ:
► ಉಡುಪಿ ಜಿಲ್ಲೆ: ಶನಿವಾರ 121 ಕೊರೋನಾ ಪಾಸಿಟಿವ್ ದೃಢ – https://kundapraa.com/?p=38332 .
► ಪಾಸಿಟಿವ್ ಬರುವವರಲ್ಲಿ ರೋಗದ ಲಕ್ಷಣಗಳಿಲ್ಲ: ಡಾ. ಪ್ರಶಾಂತ್ ಭಟ್ – https://kundapraa.com/?p=38333 .