Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜೂ 8ರಿಂದ ಕೊಲ್ಲೂರು ಶ್ರೀ ಮೂಕಾಂಬಿಕೆಯ ದರ್ಶನಕ್ಕೆ ಅವಕಾಶ, ದರ್ಶನಕ್ಕೆ ಸಮಯ ನಿಗದಿ
    ಊರ್ಮನೆ ಸಮಾಚಾರ

    ಜೂ 8ರಿಂದ ಕೊಲ್ಲೂರು ಶ್ರೀ ಮೂಕಾಂಬಿಕೆಯ ದರ್ಶನಕ್ಕೆ ಅವಕಾಶ, ದರ್ಶನಕ್ಕೆ ಸಮಯ ನಿಗದಿ

    Updated:07/06/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಸೋಮವಾರದಿಂದ ರಾಜ್ಯಾದ್ಯಂತ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದು, ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿಯೂ ಸೋಮವಾರದಿಂದ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲು ಭರದ ಸಿದ್ಧತೆಗಳು ನಡೆಯುತ್ತಿದೆ.

    Click Here

    Call us

    Click Here

    ನಾಳೆಯಿಂದ ದೇವರ ದರ್ಶನಕ್ಕೆ ಸಮಯ ನಿಗದಿಪಡಿಸಲಾಗಿದ್ದು, ಬೆಳಿಗ್ಗೆ 5 ಗಂಟೆಗೆ ಬಾಗಿಲು ತೆರೆಯಲಿದೆ. ಬೆಳಿಗ್ಗೆ 5:30ರಿಂದ 7:30ರ ತನಕ ಭಕ್ತಾದಿಗಳಿಗೆ ಮೊದಲ ಹಂತದಲ್ಲಿ ದರ್ಶನಕ್ಕೆ ವ್ಯವಸ್ಥೆ, ಮತ್ತೆ ಬೆಳಿಗ್ಗೆ 10:30ರಿಂದ 1:30 ಹಾಗೂ ಮಧ್ಯಾಹ್ನ 3 ಗಂಟೆಯಿಂದ ಸಂಜೆ 6 ಗಂಟೆಯ ತನಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

    ಸರ್ಕಾರ ಹಾಗೂ ಜಿಲ್ಲಾಡಳಿತ ಸೂಚಿಸಿರುವ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಲು ನೌಕರರು ಹಾಗೂ ಹೊರ ಗುತ್ತಿಗೆ ಯವರಿಗೆ ತರಬೇತಿ ನೀಡಲಾಗಿದೆ. ದೇವಸ್ಥಾನ ಪ್ರವೇಶ ಮಾಡುವ ಮೊದಲು ಕೈ ಕಾಲು ತೊಳೆದು ಬಳಿಕ ಭಕ್ತರು ಸ್ಯಾನಿಟೈಸ್ ಮಾಡುವುದನ್ನು ಕಡ್ಡಾಯ ಮಾಡಲಾಗಿದೆ. ದೇವಳದ ಎದುರಿನ ಮುಖ್ಯದ್ವಾರದಿಂದ ಒಳ ಪ್ರವೇಶಿಸಿ, ಆನೆ ಬಾಗಿಲಿನ ಮೂಲಕ ಹೊರಕ್ಕೆ ತೆರಳಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ದೇವಳದ ಬಲಿಪೀಠದ ಎದುರು ನಿಂತು ದರ್ಶನ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಒಳಕ್ಕೆ ಪ್ರವೇಶಿಸಲು ಅವಕಾಶವಿಲ್ಲ. ದೇವಳದಲ್ಲಿ ಯಾವುದೇ ಪೂಜೆ ಹಾಗೂ ಸಂಕಲ್ಪಗಳಿಗೆ ಅವಕಾಶವಿಲ್ಲ. ಸೇವೆ ಮಾಡಬಯಸುವವರು ಹಣ ಪಾವತಿ ಮಾಡಿದಲ್ಲಿ ಆನ್ ಲೈನ್ ಸೇವಾದಾರರಿಗೆ ಕಳುಹಿಸುವಂತೆ ಅಂಚೆ ಮೂಲಕ ಕುಂಕುಮ ಪ್ರಸಾದ ಕಳುಹಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

    ► ಜೂ.8 ರಿಂದ ಜಿಲ್ಲೆಯಲ್ಲಿ ದೇವಾಲಯಗಳ ಆರಂಭ. ಇವಿಷ್ಟು ನಿಯಮ ಪಾಲನೆ ಕಡ್ಡಾಯ – https://kundapraa.com/?p=38342 .

    Click here

    Click here

    Click here

    Click Here

    Call us

    Call us

    • ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ನಿಗದಿಪಡಿಸಿದ ಸಮಯದಲ್ಲಿ ದರ್ಶನ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಧ್ವನಿ ವರ್ಧಕದ ಮೂಲಕ ಭಕ್ತರನ್ನು ಎಚ್ಚರಿಸಲಾಗುವುದು. ಹಂತ ಹಂತವಾಗಿ ಅನ್ನದಾನಕ್ಕೆ ವ್ಯವಸ್ಥೆ ಮಾಡಲಾಗುವುದು. – ಅರವಿಂದ ಸುತ್ತಗುಂಡಿ, ದೇವಳದ ಕಾರ್ಯನಿರ್ವಹಣಾಧಿಕಾರಿ
    • ಇಷ್ಟು ದಿನ ದೇವರ ದರ್ಶನಕ್ಕೆ ಅವಕಾಶ ಇರಲಿಲ್ಲ. ಜು.8ರಿಂದ ಅವಕಾಶವಿದ್ದು ದೇವಸ್ಥಾನ ತೆರೆಯುವ ಕಾರಣಕ್ಕೆ ಭಕ್ತರು ಒಮ್ಮೆಲೆ ಮುಗಿಬೀಳಬಾರದು. ದಿನವೂ ದರ್ಶನಕ್ಕೆ ಅವಕಾಶವಿರುವುದರಿಂದ ಮಾಸ್ಕ್ ಧರಿಸಿಕೊಂಡು, ಸಾಮಾಜಿಕ ಅಂತರ ಪಾಲಿಸಿ ದೇವಳಕ್ಕೆ ತೆರಳಬೇಕು ಸರಕಾರದ ನಿರ್ದೇಶನಗಳನ್ನು ಪಾಲಿಸಿ ಎಚ್ಚರದಿಂದಿರುವುದು ಅಗತ್ಯ. – ಬಿ. ಎಂ. ಸುಕುಮಾರ ಶೆಟ್ಟಿ, ಶಾಸಕರು, ಬೈಂದೂರು ವಿಧಾನಸಭಾ ಕ್ಷೇತ್ರ

    ಇದನ್ನೂ ಓದಿ:
    ► ಉಡುಪಿ ಜಿಲ್ಲೆ: ಭಾನುವಾರ 13 ಕೊರೋನಾ ಪಾಸಿಟಿವ್ ದೃಢ – https://kundapraa.com/?p=38382 .
    ► ಕೋವಿಡ್-19 ಚಿಕಿತ್ಸೆಗೆ ಜಿಲ್ಲಾಡಳಿತ ಹಣ ಪಡೆಯುತ್ತಿದೆ ಎಂದು ಆರೋಪಿಸಿದ್ದವನ ಬಂಧನ – https://kundapraa.com/?p=38373 .
    ► ಉಡುಪಿ ಜಿಲ್ಲೆ: ಶನಿವಾರ 121 ಕೊರೋನಾ ಪಾಸಿಟಿವ್ ದೃಢ – https://kundapraa.com/?p=38332 .
    ► ಪಾಸಿಟಿವ್ ಬರುವವರಲ್ಲಿ ರೋಗದ ಲಕ್ಷಣಗಳಿಲ್ಲ: ಡಾ. ಪ್ರಶಾಂತ್ ಭಟ್ – https://kundapraa.com/?p=38333 .
    ► ಜೂ.8 ರಿಂದ ಜಿಲ್ಲೆಯಲ್ಲಿ ದೇವಾಲಯಗಳ ಆರಂಭ. ಇವಿಷ್ಟು ನಿಯಮ ಪಾಲನೆ ಕಡ್ಡಾಯ – https://kundapraa.com/?p=38342 .

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    19 − 6 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.