ಕುಂದಾಪುರ: ತಾಲೂಕು ಯುವ ಬಂಟರ ಸಂಘದ ವಿದ್ಯಾ ದೀವಿಗೆ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ ಮತ್ತು ತಂದೆ-ತಾಯಿಯರನ್ನು ಕಳೆದುಕೊಂಡ ಕುಂದಾಪುರ ತಾಲೂಕು ಜಡ್ಕಲ್ ಸಮೀಪದ ಜನ್ನಾಲ್ ಗ್ರಾಮದ ಅಜಿತ್ ಶೆಟ್ಟಿ ಮತ್ತು ಅರ್ಚನಾ ಶೆಟ್ಟಿ ಅವರ ವಿದ್ಯಾಭ್ಯಾಸದ ವೆಚ್ಚವನ್ನು ಭರಿಸುವ ಸಲುವಾಗಿ ರೂ. ೧೦,೦೦೦ ಮೊತ್ತದ ಆರ್ಥಿಕ ನೆರವನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಅಂಪಾರು ನಿತ್ಯಾನಂದ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಉಮೇಶ್ ಶೆಟ್ಟಿ ಶಾನ್ಕಟ್ಟು, ವಿದ್ಯಾರ್ಥಿ ವೇತನ ಸಮಿತಿ ಸಂಚಾಲಕ ಪ್ರತಾಪಚಂದ್ರ ಶೆಟ್ಟಿ ಹಳ್ನಾಡು, ಕಾರ್ಯಕಾರಿ ಸಮಿತಿ ಸದಸ್ಯ ಅವಿನಾಶ್ ರೈ ಉಪಸ್ಥಿತರಿದ್ದರು.