ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಜೂ.11ರ ಗುರುವಾರ ಒಟ್ಟು 22 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಈ ಪೈಕಿ 20 ಮಂದಿ ಮಹಾರಾಷ್ಟ್ರದಿಂದ ಹಿಂದಿರುಗಿದವರಾಗಿದ್ದು, ಸ್ಥಳೀಯ ಪ್ರಕರಣಗಳಲ್ಲಿ ಓರ್ವ ಆರೋಗ್ಯ ಕಾರ್ಯಕರ್ತೆ ಹಾಗೂ ಡಿ ದರ್ಜೆಯ ನೌಕರರಿಗೆ ಪಾಸಿಟಿವ್ ಬಂದಿದೆ. 22 ಮಂದಿಯಲ್ಲಿ 11 ಪುರುಷರು, 9 ಮಹಿಳೆಯರು ಹಾಗೂ ಇಬ್ಬರು ಮಕ್ಕಳಿಗೆ ಪಾಸಿಟಿವ್ ದೃಢವಾಗಿದೆ. ಎಲ್ಲರಿಗೂ ಈಗಾಗಲೇ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಸಂಜೆ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ ಗುಣಮುಖರಾದ 106 ಮಂದಿಯನ್ನು ಬಿಡುಗಡೆಗೊಳಿಸಲಾಗುತ್ತದೆ.
ಜಿಲ್ಲೆಯಲ್ಲಿ ಸದ್ಯ ಒಟ್ಟು 968 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 550 ಮಂದಿ ಬಿಡುಗಡೆಯಾಗಿದ್ದು, 417 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.
ಇದನ್ನೂ ಓದಿ:
► ಉಡುಪಿ ಜಿಲ್ಲೆ: ಗುರುವಾರ 22 ಕೊರೋನಾ ಪಾಸಿಟಿವ್ ದೃಢ – https://kundapraa.com/?p=38496 .
► ಜಿಲ್ಲೆಯಲ್ಲಿ ನೂತನ ಕ್ವಾರಂಟೈನ್ ನಿಯಮ ಜಾರಿ: ಜಿಲ್ಲಾಧಿಕಾರಿ ಜಿ. ಜಗದೀಶ್ – https://kundapraa.com/?p=38518 .
► ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಮನೆಗೆ ತೆರಳಿ ಪಾಠ ಮಾಡಿದ ಮಾದರಿ ಶಿಕ್ಷಕ ಬಾಬು ಶೆಟ್ಟಿ – https://kundapraa.com/?p=38485 .
► ಉಡುಪಿ ಜಿಲ್ಲೆ: ಎಸ್.ಎಸ್.ಎಲ್.ಸಿ ಪರೀಕ್ಷೆ ಮಾಹಿತಿಗಾಗಿ ಸಹಾಯವಾಣಿ – https://kundapraa.com/?p=38453 .
► ಮನೆಯಲ್ಲಿಯೇ ಕುಳಿತು ಉಡುಪಿ ಜಿಲ್ಲಾಧಿಕಾರಿ ಕಚೇರಿಯ ಸೇವೆ ಪಡೆಯುವ ನೂತನ ಯೋಜನೆ ಜಾರಿ – https://kundapraa.com/?p=38501 .