ಕುಂದಾಪುರ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೈಂದೂರು ವಲಯ ಇದರ ಗೌರವಾಧ್ಯಕ್ಷರಾಗಿ ಚಪ್ಪರಮಕ್ಕಿ ಕರುಣಾಕರ ಶೆಟ್ಟಿ ಇವರು ಆಯ್ಕೆಯಾಗಿದ್ದಾರೆ. ಇವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೆರಾಡಿಯಲ್ಲಿ ಸಹ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಬೈಂದೂರು ವಲಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷರಾಗಿ, ಅನೇಕ ಸಂಘ ಸಂಸ್ಥೆಗಳಲ್ಲಿ ಸದಸ್ಯರಾಗಿ ಸೇವೆಸಲ್ಲಿಸಿರುತ್ತಾರೆ.