ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಜೂ.12ರ ಶುಕ್ರವಾರ ಒಟ್ಟು ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಈ ಪೈಕಿ 21 ಪ್ರಕರಣ ಮಹಾರಾಷ್ಟ್ರ ಮೂಲದ್ದಾಗಿದೆ. ಓರ್ವ ಸ್ಥಳೀಯ ವೃದ್ಧರಿಗೆ ಪಾಸಿಟಿವ್ ಬಂದಿದೆ. ಎಲ್ಲರಿನ್ನೂ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. 22 ಮಂದಿಯಲ್ಲಿ 13 ಮಂದಿ ಪುರುಷರು, 6 ಮಂದಿ ಮಹಿಳೆಯರು ಹಾಗೂ 3 ಮಕ್ಕಳಿಗೆ ಪಾಸಿಟಿವ್ ದೃಢವಾಗಿದೆ.
ಜಿಲ್ಲೆಯಲ್ಲಿ ಸದ್ಯ ಒಟ್ಟು 990 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 581ಮಂದಿ ಬಿಡುಗಡೆಯಾಗಿದ್ದು, 408 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.