ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಜೂ.13ರ ಶನಿವಾರ ಒಟ್ಟು 15 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಎಲ್ಲಾ ಪ್ರಕರಣಗಳು ಮಹಾರಾಷ್ಟ್ರ ಮೂಲದ್ದಾಗಿವೆ. ರಾಜ್ಯದ ಬುಲೆಟಿನಿನಲ್ಲಿ 14 ಪಾಸಿಟಿವ್ ಬಂದಿರುವ ಬಗ್ಗೆ ತಿಳಿಸಲಾಗಿದೆ. ಆದರೆ ಉಡುಪಿ ಜಿಲ್ಲಾಧಿಕಾರಿಗಳು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಒಟ್ಟು 15 ಪ್ರಕರಣಗಳು ವರದಿಯಾಗಿರುವ ಬಗ್ಗೆ ಸ್ಪಷ್ಟಪಡಿಸಿದ್ದಾರೆ.
ಜಿಲ್ಲೆಯಲ್ಲಿ ಸದ್ಯ ಒಟ್ಟು 1006 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 720 ಮಂದಿ ಬಿಡುಗಡೆಯಾಗಿದ್ದು, 285 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.
ಇದನ್ನೂ ಓದಿ:
► ಕುಂದಾಪುರ: ಮೃತ ತಾಯಿಯನ್ನು ಕಂಡು ಮಗನೂ ಹೃದಯಾಘಾತದಿಂದ ನಿಧನ – https://kundapraa.com/?p=38595 .