ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಜೂ.15ರ ಸೋಮವಾರ ಒಟ್ಟು 2 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಈ ಪೈಕಿ 51 ವರ್ಷದ ಮಹಿಳೆ ಮಹಾರಾಷ್ಟ್ರ ಹಿಂದಿರುಗಿದವರಾಗಿದ್ದು, 29 ವರ್ಷದ ಮಹಿಳೆಗೆ ಪಿ-5451 ಸಂಪರ್ಕದಿಂದ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ ಈವರೆಗೆ 819 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಜಿಲ್ಲೆಯಲ್ಲಿ ಸದ್ಯ ಒಟ್ಟು 1028 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 819 ಮಂದಿ ಬಿಡುಗಡೆಯಾಗಿದ್ದು, 208 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.
ಇದನ್ನೂ ಓದಿ:
► ಕುಂದಾಪುರ ಎಪಿಎಂಸಿ: ಅಧ್ಯಕ್ಷರಾಗಿ ವೆಂಕಟ ಪೂಜಾರಿ, ಉಪಾಧ್ಯಕ್ಷರಾಗಿ ವಸಂತ ಕುಮಾರ್ ಶೆಟ್ಟಿ ಆಯ್ಕೆ – https://kundapraa.com/?p=38639 .
► ಎಸ್.ಎಸ್.ಎಲ್.ಸಿ ಪರೀಕ್ಷೆ: ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ, ಪೋಷಕರು ಆತಂಕ ಪಡುವ ಅಗತ್ಯವಿಲ್ಲ: ಡಿಸಿ ಜಿ. ಜಗದೀಶ್ – https://kundapraa.com/?p=38630 .