ಎಸ್.ವಿ. ಪದವಿ ಪೂರ್ವ ಕಾಲೇಜಿನಲ್ಲಿ ಆನ್ಲೈನ್ ತರಗತಿಗಳ‌ ಉದ್ಘಾಟನೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಬದಲಾದ ಕಾಲಘಟ್ಟ ದಲ್ಲಿ ವಿದ್ಯಾರ್ಥಿಗಳು ಹೊಸತನದ ಕಲಿಕೆಯ ಸಾಧ್ಯತೆಗಳನ್ನು ಇರುವ ಅವಕಾಶಗಳಲ್ಲಿಯೇ ಸಂಪೂರ್ಣವಾಗಿ ಬಳಸಿಕೊಳ್ಳುವ ಪ್ರಯತ್ನ ಮಾಡಬೇಕು. ನಮ್ಮ ವಿದ್ಯಾರ್ಥಿಗಳು ಕಲಿಯುವ ಯಾವುದೇ ಹೊಸ ಅವಕಾಶಗಳಿಂದ ವಂಚಿತರಾಗಬಾರದೆನ್ನುವ ಉದ್ದೇಶದಿಂದ ಈ ಆನ್ಲೈನ್ ತರಗತಿಗಳನ್ನು ನಾವು ಪ್ರಾರಂಭಿಸುತ್ತಿದ್ದೇವೆ ಎಂದು ಗಂಗೊಳ್ಳಿಯ ಜಿ.ಎಸ್.ವಿ.ಎಸ್ ಅಸೋಸಿಯೇಷನ್ನಿನ ಅಧ್ಯಕ್ಷ ಡಾ. ಕಾಶೀನಾಥ್ ಪೈ ಅವರು ಹೇಳಿದರು.

Call us

Click Here

ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಆರಂಭಗೊಂಡ ಆನ್ಲೈನ್ ತರಗತಿಗಳ ಕಾರ್ಯ ಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ರಸಾಯನ ಶಾಸ್ತ್ರ ಉಪನ್ಯಾಸಕರಾದ ಆರ್.ಎನ್ ರೇವಣ್ಕರ್ ಪಾಠವನ್ನು ಆರಂಭಿಸುವುದರ ಮೂಲಕ ತರಗತಿಯನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಜಿ.ಎಸ್.ವಿ.ಎಸ್ ಅಸೋಸಿಯೇಷನ್ ಕಾರ್ಯದರ್ಶಿ ಹೆಚ್ ಗಣೇಶ್ ಕಾಮತ್, ಸರಸ್ವತಿ ವಿದ್ಯಾಲಯ ಸಂಸ್ಥೆಗಳ ಕಾರ್ಯದರ್ಶಿ ಎನ್ ಸದಾಶಿವ ನಾಯಕ್, ಪ್ರಾಂಶುಪಾಲೆ ಕವಿತಾ ಎಮ್ ಸಿ ಉಪಸ್ಥಿತರಿದ್ದರು.

ಇಂಗ್ಲೀಷ್ ಉಪನ್ಯಾಸಕ ಥಾಮಸ್ ಪಿ.ಎ ಸ್ವಾಗತಿಸಿದರು. ಕನ್ನಡ ಉಪನ್ಯಾಸಕ ಸುಜಯೀಂದ್ರ ಹಂದೆ ಕಾರ್ಯಕ್ರಮ ನಿರ್ವಹಿಸಿದರು. ಹಿಂದಿ ಉಪನ್ಯಾಸಕ ನಾರಾಯಣ ಈ ನಾಯ್ಕ್ ವಂದಿಸಿದರು.

Click here

Click here

Click here

Click Here

Call us

Call us

Leave a Reply