ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ಬೈಂದೂರು ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಓರ್ವರಿಗೆ ಕೋರೋನಾ ಪಾಸಿಟಿವ್ ಬಂದಿರುವುದು ದೃಢವಾಗಿದ್ದು, ಸದ್ಯ ಅವರನ್ನು ಕುಂದಾಪುರದ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸ್ ಸಿಬ್ಬಂದಿಯಲ್ಲಿ ಶೀತ, ಗಂಟಲು ನೋವಿನ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಅವರನ್ನು ಕೊವೀಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು ಎನ್ನಲಾಗಿದೆ. ಅದರ ವರದಿ ಇಂದು ದೊರೆತಿದ್ದು, ಪಾಸಿಟಿವ್ ದೃಢವಾಗಿತ್ತು. ಸದ್ಯ ಬೈಂದೂರು ಪೊಲೀಸ್ ಠಾಣೆ ಹಾಗೂ ವೃತ್ತ ನಿರೀಕ್ಷಕರ ಕಛೇರಿಯ ಎಲ್ಲಾ ಸಿಬ್ಬಂದಿಗಳನ್ನು 14 ದಿನಗಳ ಕಾಲ ಹೋಂ ಕ್ವಾರಂಟೈನ್ ಮಾಡಲಾಗುತ್ತಿದೆ. ಪಾಸಿಟಿವ್ ಬಂದಿರುವ ಸಿಬ್ಬಂದಿಯ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಕ್ಕೆ ಬಂದವರನ್ನು ಗುರುತಿಸಿ ಅವರನ್ನು ಹೋಂ ಕ್ವಾರಂಟೈನ್ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. 7 ದಿನಗಳ ಬಳಿಕ ಪ್ರಾಥಮಿಕ ಸಂಪರ್ಕಕ್ಕೆ ಬಂದವರ ಸ್ವ್ಯಾಬ್ ತೆಗೆದು ಪರೀಕ್ಷೆಗೆ ಕಳುಹಿಸಲಾಗುತ್ತಿದೆ ಮತ್ತು ಅವರ ಸಂಪರ್ಕಕ್ಕೆ ಬಂದವರನ್ನು ಗುರುತಿಸಿ ಕ್ವಾರಂಟೈನ್ ಮಾಡಲಾಗುತ್ತದೆ. ಕುಂದಾಪ್ರ ಡಾಟ್ ಕಾಂ ಸುದ್ದಿ.
ಠಾಣೆ ಸೀಲ್ ಡೌನ್?
ಪೊಲೀಸ್ ಸಿಬ್ಬಂದಿಗೆ ಪಾಸಿಟಿವ್ ಬಂದಿರುವುದು ದೃಢವಾದಲ್ಲಿ ಠಾಣೆ ಹಾಗೂ ವೃತ್ತ ನಿರೀಕ್ಷಕರ ಕಛೇರಿಯನ್ನು ಮುಚ್ಚಲಾಗುತ್ತದೆ. ಸ್ಯಾನಿಟೈಜೇಷನ್ ಮಾಡಿದ ಬಳಿಕ ಒಂದೆರಡು ದಿನಗಳಲ್ಲಿ ಮತ್ತೆ ಠಾಣೆಯನ್ನು ಪುನರಾರಂಭಿಸಲಾಗುತ್ತದೆ. ಅಲ್ಲಿಯ ತನಕ ಹಳೆಯ ವೃತ್ತ ನಿರೀಕ್ಷಕರ ಕಛೇರಿಯಲ್ಲಿ ಕುಂದಾಪುರ ಉಪವಿಭಾಗದ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಎಎಸ್ಪಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ/ಕುಂದಾಪ್ರ ಡಾಟ್ ಕಾಂ ಸುದ್ದಿ/