ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ವಿಶ್ವದಾದ್ಯಂತ ಕರೋನಾ ವೈರಸ್ ಹಾವಳಿ ಹೆಚ್ಚಾಗುತ್ತಿದ್ದು, ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಯಾವುದೇ ಭೀತಿ ಇಲ್ಲದೆ ಪರೀಕ್ಷೆ ಎದುರಿಸಬೇಕು. ಗಂಗೊಳ್ಳಿಯ ಎಸ್.ವಿ.ಶಾಲೆಯ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರವನ್ನು ಸ್ಯಾನಿಟೈಸ್ ಮಾಡಲಾಗಿದ್ದು, ಪೋಷಕರು ಯಾವುದೇ ಆತಂಕಕ್ಕೆ ಒಳಗಾಗದೆ ಮಕ್ಕಳನ್ನು ಪರೀಕ್ಷೆಗೆ ಸಜ್ಜುಗೊಳಿಸಬೇಕು. ಪರೀಕ್ಷೆ ಬರೆಯುವ ಮಕ್ಕಳ ಉಪಯೋಗಕ್ಕಾಗಿ ಹ್ಯಾಂಡ್ ಸ್ಯಾನಿಟೈಸರ್‌ನ್ನು ಎಲ್ಲಾ ಶಾಲೆಗಳಿಗೆ ವಿತರಿಸಲಾಗಿದೆ ಎಂದು ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಶಿವಾನಂದ ಪೂಜಾರಿ ಹೇಳಿದರು.
ಗಂಗೊಳ್ಳಿ ರೋಟರಿ ಕ್ಲಬ್ ವತಿಯಿಂದ ಗಂಗೊಳ್ಳಿ ಸ.ವಿ.ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ಜರಗಿದ ಕಾರ್ಯಕ್ರಮದಲ್ಲಿ ಗಂಗೊಳ್ಳಿ ಗ್ರಾಮದ ಶಾಲೆಗಳ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸ್ಯಾನಿಟೈಸರ್ ಮತ್ತು ಮಾಸ್ಕ್ ವಿತರಿಸಿ ಅವರು ಮಾತನಾಡಿದರು.
ಗಂಗೊಳ್ಳಿ ಸ.ವಿ.ಪದವಿಪೂರ್ವ ಕಾಲೇಜು, ಸ.ವಿ.ಆಂಗ್ಲ ಮಾಧ್ಯಮ ಶಾಲೆ, ಸ್ಟೆಲ್ಲಾ ಮಾರೀಸ್ ಶಾಲೆಗಳ ವಿದ್ಯಾರ್ಥಿಗಳಿಗೆ ಸ್ಯಾನಿಟೈಸರ್ ಮತ್ತು ಮಾಸ್ಕ್ ವಿತರಿಸಲಾಯಿತು. ಗಂಗೊಳ್ಳಿ ರೋಟರಿ ಕ್ಲಬ್‌ನ ನಿಯೋಜಿತ ಅಧ್ಯಕ್ಷ ಬಿ.ಲಕ್ಷ್ಮೀಕಾಂತ ಮಡಿವಾಳ, ನಿಯೋಜಿತ ಕಾರ್ಯದರ್ಶಿ ಎಂ.ನಾಗೇಂದ್ರ ಪೈ, ಎಚ್.ಗಣೇಶ ಕಾಮತ್, ರೋಟರಿ ಕ್ಲಬ್ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.