ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಜೂ.26ರ ಶುಕ್ರವಾರ 9 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ದೃಢವಾಗಿದೆ.
ಈ ಪೈಕಿ ಶಿರೂರು ಆರೋಗ್ಯ ಕೇಂದ್ರದ ಎ.ಎನ್.ಎಂ ಅವರಿಗೂ ಕೋವಿಡ್-19 ಪಾಸಿಟಿವ್ ಬಂದಿದ್ದು, ಕುಂದಾಪುರದ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೂನ್.22 ಶಿರೂರಿನ ಓರ್ವ ಆರೋಗ್ಯ ಸಿಬ್ಬಂದಿಗೆ ಪಾಸಿಟಿವ್ ಬಂದಿದ್ದು, ಅವರ ಪ್ರಾಥಮಿಕ ಸಂಪರ್ಕದಿಂದ ಇನ್ನೋರ್ವರಿಗೂ ಇಂದು ಬಂದಿ ವರದಿಯಲ್ಲಿ ಪಾಸಿಟಿವ್ ಬಂದಿತ್ತು.
ಇಂದು 147 ನೆಗೆಟಿವ್:
ಈ ತನಕ ಒಟ್ಟು 13,960ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 12,483ನೆಗೆಟಿವ್, 1,125 ಪಾಸಿಟಿವ್ ಬಂದಿದ್ದು, 352 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 147 ನೆಗೆಟಿವ್, 9 ಪಾಸಿಟಿವ್ ಬಂದಿದೆ.
86 ಸಕ್ರಿಯ ಪ್ರಕರಣ:
ಜಿಲ್ಲೆಯಲ್ಲಿ ಒಟ್ಟು 1,125ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 1037 ಮಂದಿ ಬಿಡುಗಡೆಯಾಗಿದ್ದು, 86 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ.