ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೆಪಿಸಿಸಿ ನೂತನ ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರ ಪದಗ್ರಹಣ ಹಾಗೂ ಪ್ರತಿಜ್ಞಾ ದಿನ ಕಾರ್ಯಕ್ರಮದ ಪೂರ್ವಭಾವಿಯಾಗಿ ಶನಿವಾರ ತಲ್ಲೂರಿನಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ವತಿಯಿಂದ ಯುವ ಕಾಂಗ್ರೆಸ್ ಡಿಜಿಟಲ್ ಯೂತ್ ಕಾರ್ಯಗಾರ ನೆಡೆಯಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕೊಡವೂರು ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು. ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಕೆಪಿಸಿಸಿ ವೀಕ್ಷಕ ನವೀನ್ ಡಿಸೋಜ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಸ್. ರಾಜು ಪೂಜಾರಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷಮದನ್ ಕುಮಾರ್, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿಶ್ವಾಸ್ ಅಮೀನ್ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಸಂಚಾಲಕರಾದ ಯೋಗೆಶ್ ಇನ್ನಾ ರವರು ಜ಼ೂಮ್ ಮೀಟಿಂಗ್ ಬಗ್ಗೆ ಮಾಹಿತಿ ನೀಡಿದರು.
ಬೈಂದೂರು ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ ಪೂಜಾರಿ ಸ್ವಾಗತಿಸಿದರು ವಂಡ್ಸೆ ಬ್ಲಾಕ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಪ್ರಶಾಂತ ಪೂಜಾರಿಯವರು ವಂದಿಸಿದರು.
ವಂಡ್ಸೆ ಬ್ಲಾಕ್ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಪ್ರಶಾಂತ ಪೂಜಾರಿ, ಬ್ಲಾಕ್ ಕಾಂಗ್ರೆಸ್ ನಾಯಕರುಗಳಾದ ಸಂಜೀವ ಶೆಟ್ಟಿ, ಶರತ್ ಕುಮಾರ್ ಶೆಟ್ಟಿ, ಸಂತೋಷ ಕುಮಾರ್ ಶೆಟ್ಟಿ, ಗೌರಿ ದೇವಾಡಿಗ, ಜಗದೀಶ ದೇವಾಡಿಗ, ಚಂದ್ರಶೇಖರ್ ಶೆಟ್ಟಿ, ತಬ್ರೇಜ್ ನಾಗೂರು, ಸನತ್ ಬಳೆಗಾರ್ ಸೇರಿದಂತೆ ಬೈಂದೂರು ವಿಧಾನಸಭಾ ಕ್ಷೇತ್ರದ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಯುವ ಕಾಂಗ್ರೆಸ್ ಡಿಜಿಟಲ್ ಯೂತ್ ಸದಸ್ಯರು ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.