ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕಾಲ್ತೋಡು ಸರಕಾರಿ ಆಯುರ್ವೇದ ಚಿಕಿತ್ಸಾಲಯದಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಯಷ್ ಕಿಟ್ ವಿತರಣಾ ಕಾರ್ಯಕ್ರಮ ಕಂಬದಕೋಣೆ ಗ್ರಾಮ ಪಂಚಾಯತಿಯಲ್ಲಿ ಸೋಮವಾರ ಜರುಗಿತು.
ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ. ವೀಣಾ ಕಾರಂತ್ ಆಯುಷ್ ಕಿಟ್ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಕಂಬದಕೋಣೆ ಪಂಚಾಯತ್ ಅಧ್ಯಕ್ಷ ಆನಂದ ಪೂಜಾರಿ, ಪಿಡಿಓ ಪೂರ್ಣಿಮಾ, ಹಾಗೂ ಇತರೆ ಸದಸ್ಯರು ಮೊದಲಾದವರು ಇದ್ದರು.