ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಪರೀಕ್ಷಾ ಕೇಂದ್ರವೊಂದರಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದಿದ್ದ ಉಪ್ಪುಂದದ ವಿದ್ಯಾರ್ಥಿನಿಯೋರ್ವ ಕೋರೋನಾ ಪಾಸಿಟಿವ್ ದೃಢವಾಗಿದೆ.
ಶನಿವಾರದ ತನಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೋಮವಾರ ಆಕೆ ಪರೀಕ್ಷೆಗೆ ಹಾಜರಾಗಿರಲಿಲ್ಲ. ಆಕೆಯ ಸ್ವ್ಯಾಬ್ ತೆಗೆದು ಸೋಮವಾರ ಕೋರೋನಾ ಟೆಸ್ಟ್’ಗೆ ಕಳುಹಿಸಲಾಗಿದ್ದು, ಮಂಗಳವಾರ ಬಂದ ವರದಿಯಲ್ಲಿ ಪಾಸಿಟಿವ್ ಇರುವುದು ದೃಢವಾಗಿತ್ತು. ವಿದ್ಯಾರ್ಥಿನಿಯ ಸೋಂಕಿನ ಮೂಲ ಪತ್ತೆಯಾಗಿಲ್ಲ. ವಿದ್ಯಾರ್ಥಿನಿಯನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪರೀಕ್ಷಾ ಕೊಠಡಿ ಹಾಗೂ ಮನೆಯನ್ನು ಸೀಲ್‌ಡೌನ್ ಮಾಡಿ ಪ್ರಾಥಮಿಕ ಸಂಪರ್ಕಕ್ಕೆ ಬಂದವರನ್ನು ಕ್ವಾರಂಟೈನ್ ಮಾಡಲಾಗುತ್ತದೆ.
► ಶಿಕ್ಷಣದ ಪರಿಪೂರ್ಣತೆಗೆ ಪೂರಕವಾಗಬಲ್ಲ ಶಿಕ್ಷಣ ಇಲಾಖೆಯ ಕನಸಿನ ಕೂಸು ಮಕ್ಕಳವಾಣಿ – https://kundapraa.com/?p=39132 .










