ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಗಂಗೊಳ್ಳಿ ರೋಟರಿ ಕ್ಲಬ್ ವತಿಯಿಂದ ರೋಟರಿ ಶಿಕ್ಷಣವಾಹಿನಿ ಡಿಸ್ಟ್ರಿಕ್ಟ್ ಪ್ರೊಜೆಕ್ಟ್ ೨೦೧೯-೨೦ ಗಂಗೊಳ್ಳಿಯ ಎರಡು ಶಾಲೆಗಳಿಗೆ ಕೊಡಮಾಡಿದ ವಾಶ್ ಬೇಸಿನ್‌ನ್ನು ಮಂಗಳವಾರ ಜರಗಿದ ಸರಳ ಸಮಾರಂಭದಲ್ಲಿ ಶಾಲೆಗೆ ಹಸ್ತಾಂತರಿಸಲಾಯಿತು.
ಗಂಗೊಳ್ಳಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ (ರಥಬೀದಿ) ಮತ್ತು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿಗೆ ಕೊಡ ಮಾಡಿದ ವಾಶ್ ಬೇಸಿನ್‌ನ್ನು ರೋಟರಿ ಜಿಲ್ಲೆ ೩೧೮೨ರ ಅಸಿಸ್ಟೆಂಟ್ ಗವರ್ನರ್ ರವಿರಾಜ್ ಶೆಟ್ಟಿ ಹಸ್ತಾಂತರಿಸಿ ಶುಭ ಹಾರೈಸಿದರು.
ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಶಿವಾನಂದ ಪೂಜಾರಿ, ಗಂಗೊಳ್ಳಿ ರೋಟರಿ ಕ್ಲಬ್‌ನ ಮಾಜಿ ಅಧ್ಯಕ್ಷ ಎಚ್.ಗಣೇಶ ಕಾಮತ್, ಎಸ್.ವಿ. ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷ ಡಾ.ಕಾಶೀನಾಥ ಪೈ, ಗಂಗೊಳ್ಳಿ ರೋಟರಿ ಕ್ಲಬ್‌ನ ನಿಯೋಜಿತ ಅಧ್ಯಕ್ಷ ಬಿ.ಲಕ್ಷ್ಮೀಕಾಂತ ಮಡಿವಾಳ, ನಿಯೋಜಿತ ಕಾರ್ಯದರ್ಶಿ ಎಂ.ನಾಗೇಂದ್ರ ಪೈ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ (ರಥಬೀದಿ)ಯ ಮುಖ್ಯ ಶಿಕ್ಷಕಿ ಚಂದ್ರಕಲಾ, ಅಂಗನವಾಡಿ ಕಾರ್ಯಕರ್ತೆ ಫಿಲೋಮಿನಾ ಫೆರ್ನಾಂಡಿಸ್, ರೋಟರಿ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.