ಬೈಂದೂರು: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ದೇಶದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಬೆಲೆ ಏರಿಕೆ ಹಾಗೂ ಕೇಂದ್ರದ ಬಿಜೆಪಿ ಸರಕಾರದ ಜನವಿರೋಧಿ ನೀತಿ ಖಂಡಿಸಿ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿಯವರ ನೇತೃತ್ವದಲ್ಲಿ ಬೈಂದೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಇಲ್ಲಿನ ತಹಶೀಲ್ದಾರ ಕಚೇರಿ ಬಳಿ ಸೋಮವಾರ ಪ್ರತಿಭಟನೆ ನಡೆಯಿತು.

Call us

Click Here

Click here

Click Here

Call us

Visit Now

Click here

ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಮಾತನಾಡಿ, ದೇಶದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ದಿನದಿಂದ ದಿನಕ್ಕೆ ಎರುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು ಜನಸಾಮಾನ್ಯರು ಹೈರಣಾಗಿದ್ದಾರೆ, ಹೀಗಾಗಿ ಜನರ ಹಿತದೃಷ್ಟಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಕೊರೋನಾದ ನಡುವೆಯು ಹೋರಾಟ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ.

ಇಂದು ದೇಶದಲ್ಲಿ ಅರ್ಥಿಕ ಕುಸಿತ, ನಿರುದ್ಯೋಗ ಸಮಸ್ಯೆಯಿಂದ ಜನ ಕಂಗೆಟ್ಟಿದ್ದು, ಅದರೊಂದಿಗೆ ದಿನದಿಂದ ದಿನಕ್ಕೆ ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚಳವಾಗುತ್ತಿರುವುದು ಬಿಸಿವತುಪ್ಪವಾಗಿ ಪರಿಣಮಿಸಿದೆ. ೨೦೧೪ರಲ್ಲಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ ೬೩೩೦ ರೂ. ಇದ್ದಿದ್ದು ಈಗ ೩೦೩೮ ರೂ. ಗೆ ಕುಸಿದಿದೆ, ಆದರೂ ಕೇಂದ್ರ ಸರ್ಕಾರ ಬೆಲೆ ಎರಿಕೆ ಮಾಡಿರುವುದು ಖಂಡನೀಯ ಎಂದು ಕಿಡಿಕಾರಿದ ಅವರು ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದ ಜನವಿರೋ ನೀತಿಯ ವಿರುದ್ಧ ಗ್ರಾಮ ಮಟ್ಟದಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ರಾಜ್ಯ ಸರ್ಕಾರ ಕೊರೋನಾ ನಿಯಂತ್ರಣದಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ದೂರಿದ ಅವರು ಕೊರೋನಾ ಹೆಸರಲ್ಲಿ ಕೋಟ್ಯಾಂತರ ರೂ. ಕೊಳ್ಳೆ ಹೊಡೆದಿದೆ ಎಂದು ಗಂಭೀರ ಆರೋಪ ಮಾಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್. ಮದನಕುಮಾರ, ಕಾಂಗ್ರೆಸ್ ಮುಖಂಡರಾದ ಎಸ್. ರಾಜು ಪೂಜಾರಿ, ಪ್ರಕಾಶ್ಚಂದ್ರ ಶೆಟ್ಟಿ, ಮೋಹನ್ ಪೂಜಾರಿ, ವಾಸು ಪೂಜಾರಿ, ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ ಪೂಜಾರಿ, ಮೂಕಾಂಬು ದೇವಾಡಿಗ ಸೇರಿದಂತೆ ಪಕ್ಷದ ನಾಯಕರು, ಎಲ್ಲಾ ಘಟಕಗಳ ಪದಾಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು. ಬಳಿಕ ತಹಶೀಲ್ದಾರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

Call us

Leave a Reply

Your email address will not be published. Required fields are marked *

7 − six =