ಉಡುಪಿ ಜಿಲ್ಲೆಯ ಕೋವಿಡ್ ಅಪ್ಡೇಟ್: ಭಾನುವಾರ 41 ಪಾಸಿಟಿವ್ ದೃಢ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಜು.12ರ ಭಾನುವಾರ 41 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ 2 ಮಂದಿ ಮುಂಬೈ, ಓರ್ವ ವ್ಯಕ್ತಿ ಸೌದಿ, 6 ಮಂದಿ ಅಂತರ್ಜಿಲ್ಲಾ ಪ್ರಯಾಣದ ಹಿನ್ನೆಲೆ ಹೊಂದಿದ್ದು, 32 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಪಾಸಿಟಿವ್ ಬಂದಿದೆ.

Call us

Click Here

ಒಟ್ಟು ಪ್ರಕರಣಗಳಲ್ಲಿ 26 ಮಂದಿ ಉಡುಪಿ, 11 ಮಂದಿ ಕುಂದಾಪುರ ಹಾಗೂ 4 ಮಂದಿ ಕಾರ್ಕಳ ತಾಲೂಕಿಗೆ ಸೇರಿದ್ದಾರೆ. ಇಂದು 28 ಮಂದಿ ಬಿಡುಗಡೆಗೊಂಡಿದ್ದಾರೆ.

ದಾವಣಗೆರೆಯಿಂದ ಚಿಕಿತ್ಸೆಗಾಗಿ ಬಂದಿದ್ದ ವ್ಯಕ್ತಿಯೋರ್ವ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಿಸದೇ ಮೃತರಾಗಿದ್ದರು. ಅವರ ಕೊವೀಡ್ ಪರೀಕ್ಷೆಯಲ್ಲಿ ಪಾಸಿಟಿವ್ ಇರುವುದು ದೃಢವಾಗಿತ್ತು.

573 ನೆಗೆಟಿವ್:
ಈ ತನಕ ಒಟ್ಟು 22,327 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 18,863 ನೆಗೆಟಿವ್, 1,608 ಪಾಸಿಟಿವ್ ಬಂದಿದ್ದು, 1,856 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 573 ನೆಗೆಟಿವ್, 41 ಪಾಸಿಟಿವ್ ಬಂದಿದೆ. ಒಟ್ಟು 1,304 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ.

332 ಸಕ್ರಿಯ ಪ್ರಕರಣ:
ಜಿಲ್ಲೆಯಲ್ಲಿ ಒಟ್ಟು 1,608 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 1,273 ಮಂದಿ ಬಿಡುಗಡೆಯಾಗಿದ್ದು, 332 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಮೂವರು ವ್ಯಕ್ತಿಗಳು ಮೃತಪಟ್ಟಿದ್ದಾರೆ.

Click here

Click here

Click here

Click Here

Call us

Call us

ಇದನ್ನೂ ಓದಿ:
► ಉಡುಪಿ: ಕೋವಿಡ್ ಸೋಂಕಿತ 70 ವರ್ಷದ ವೃದ್ಧ ಸಾವು – https://kundapraa.com/?p=39444 .
► ಬೆಂಗಳೂರಿನಿಂದ ಬಂದರೆ ಹೋಮ್ ಕ್ವಾರಂಟೈನ್‌ನಲ್ಲಿರಿ: ಉಡುಪಿ ಜಿಲ್ಲಾಡಳಿತ ಮನವಿ – https://kundapraa.com/?p=39446 .

Leave a Reply