ಕುಂದಾಪ್ರ ಡಾಟ್ ಕಾಂ ಸುದ್ದಿ
ಗಂಗೊಳ್ಳಿ: 2019-20ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಉತ್ತಮ ಸಾಧನೆ ಮಾಡಿದ್ದು, ಶೇ. 95.6 ಫಲಿತಾಂಶ ದಾಖಲಿಸಿದೆ.
ಪರೀಕ್ಷೆಗೆ ಹಾಜರಾದ ಒಟ್ಟು 159 ವಿದ್ಯಾರ್ಥಿಗಳ ಪೈಕಿ 152 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. 42 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 88 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 17 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಹಫ್ಸಾ (586), ವಾಣಿಜ್ಯ ವಿಭಾಗದಲ್ಲಿ ಅಕ್ಷಿತಾ (574) ಮತ್ತು ಯಶ್ರ (574) ಹಾಗೂ ಕಲಾ ವಿಭಾಗದಲ್ಲಿ ಚೈತ್ರ (557) ಕಾಲೇಜಿನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಗಣಿತಶಾಸ್ತ್ರ, ಅರ್ಥಶಾಸ್ತ್ರ ಮತ್ತು ಸಂಸ್ಕೃತದಲ್ಲಿ ತಲಾ ಮೂವರು ವಿದ್ಯಾರ್ಥಿಗಳು, ಅಕೌಂಟೆನ್ಸಿ, ಕಂಪ್ಯೂಟರ್ ಸಾಯನ್ಸ್ ಮತ್ತು ಬಯೋಲಜಿಯಲ್ಲಿ ತಲಾ ಒಬ್ಬರು 100 ಅಂಕ ಪಡೆದುಕೊಂಡಿದ್ದಾರೆ.