ಉಡುಪಿ ಜಿಲ್ಲೆ: ಎರಡು ಸಾವಿರದ ಗಡಿ ದಾಟಿದ ಕೋವಿಡ್ ಪ್ರಕರಣ: ಶನಿವಾರ 109 ಪಾಸಿಟಿವ್

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ ಪ್ರಕರಣ ಎರಡು ಸಾವಿರದ ಗಡಿ ಮೀರಿದ್ದು ಜು.18ರ ಶನಿವಾರ 109 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ.  ಈ ಪೈಕಿ ಕುಂದಾಪುರ ತಾಲೂಕಿನ 40, ಉಡುಪಿ ತಾಲೂಕಿನ 58 ಹಾಗೂ ಕಾರ್ಕಳ ತಾಲೂಕಿನ 11 ಮಂದಿಗೆ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ 63 ಪುರುಷರು, 39 ಮಹಿಳೆಯರು, 7 ಮಕ್ಕಳು ಸೇರಿದ್ದಾರೆ.

Call us

Click Here

ಇವರಲ್ಲಿ 2 ಮಂದಿ ಬೆಂಗಳೂರು, ತಲಾ ಓರ್ವ ವ್ಯಕ್ತಿ ದಾವಣಗೆರೆ ಹಾಗೂ ಮಂಗಳೂರು, ಓರ್ವ ವ್ಯಕ್ತಿ ದುಬೈ ಹಾಗೂ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಸಾರಿ 5 ಪ್ರಕರಣ, ILI 34 ಪ್ರಕರಣಗಳಾಗಿದ್ದು ಉಳಿದ ಪ್ರಕರಣಗಳು ಪ್ರಾಥಮಿಕ ಸಂಪರ್ಕದಿಂದ ಬಂದಿದೆ.

ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಿರಿಮಂಜೇಶ್ವರ ಮೂಲದ 80 ವರ್ಷದ ವ್ಯಕ್ತಿ ಶುಕ್ರವಾರ ಮೃತಪಟ್ಟಿದ್ದು, ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ತೀವ್ರ ಉಸಿರಾಟ, ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಎರಡು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೋವಿಡ್ ಮಾರ್ಗಸೂಚಿಯಂತೆ ಕುಂದಾಪುರದಲ್ಲಿ ಅಂತಿಮ ಸಂಸ್ಕಾರ ನಡೆಸಲಾಗಿದೆ. ಜಿಲ್ಲೆಯಲ್ಲಿ ಈತನಕ ಒಟ್ಟು 10 ಸಾವು ಸಂಭವಿಸಿದೆ.

ಕುಂದಾಪುರದ ಪೊಲೀಸ್ ಠಾಣೆಯ 54ವರ್ಷ ಪ್ರಾಯದ ಎಎಸ್ಐ ಒಬ್ಬರಿಗೆ ಕೊರೋನಾ ಪಾಸಿಟಿವ್ ದೃಢವಾಗಿದ್ದು, ಒಂದು ದಿನದ ಮಟ್ಟಿಗೆ ಠಾಣೆಯನ್ನು ಸಮೀಪದ ಐಬಿಗೆ ಸ್ಥಳಾಂತರಿಸಲಾಗಿದೆ. ಹೈವೇ ಪಟ್ರೋಲ್ ಕರ್ತವ್ಯದಲ್ಲಿದ್ದ ಎಎಸ್ಐ ಅವರು ಜು.10ರಿಂದ ಶಿಪ್ಟ್ ಕರ್ತವ್ಯದ ಹಿನ್ನೆಲೆ ಮನೆಯಲ್ಲಿಯೇ ಇದ್ದರು. ಆದರೆ ಬೇರೆ ಸಿಬ್ಬಂದಿಗೆ ಪಾಸಿಟಿವ್ ಬಂದಿದ್ದರಿಂದ ಇವರ ಗಂಟಲು ದ್ರವ ಪರೀಕ್ಷೆ ನಡೆಸಲಾಗಿತ್ತು ವರದಿಯಲ್ಲಿ ಕೊರೋನಾ ಪಾಸಿಟಿವ್ ದೃಢವಾಗಿದೆ.

292 ನೆಗೆಟಿವ್:
ಈ ತನಕ ಒಟ್ಟು 24382 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 21757 ನೆಗೆಟಿವ್, 2088 ಪಾಸಿಟಿವ್ ಬಂದಿದ್ದು, 537 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 292 ನೆಗೆಟಿವ್, 109 ಪಾಸಿಟಿವ್ ಬಂದಿದೆ. ಒಟ್ಟು 2197 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ.

Click here

Click here

Click here

Click Here

Call us

Call us

492 ಸಕ್ರಿಯ ಪ್ರಕರಣ:
ಜಿಲ್ಲೆಯಲ್ಲಿ ಒಟ್ಟು 2,088 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 1586 ಮಂದಿ ಬಿಡುಗಡೆಯಾಗಿದ್ದು, 492 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಕೊರೋನಾ ಪಾಸಿಟಿವ್ ಇದ್ದ 10 ಮಂದಿ ಮೃತಪಟ್ಟಿದ್ದಾರೆ.

Leave a Reply