ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಜು.19ರ ಭಾನುವಾರ 134 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 52, ಉಡುಪಿ ತಾಲೂಕಿನ 59 ಹಾಗೂ ಕಾರ್ಕಳ ತಾಲೂಕಿನ 23 ಮಂದಿಗೆ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ 70 ಪುರುಷರು, 54 ಮಹಿಳೆಯರು, 10 ಮಕ್ಕಳು ಸೇರಿದ್ದಾರೆ.
ಇವರಲ್ಲಿ 4 ಮಂದಿ ಬೆಂಗಳೂರು, 3 ಮಂದಿ ಮಂಗಳೂರು, ತಲಾ ಓರ್ವ ವ್ಯಕ್ತಿ ಮುಂಬೈ, ಚೆನೈ ಹಾಗೂ ದುಬೈ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಸಾರಿ 5 ಪ್ರಕರಣ, ILI 31 ಪ್ರಕರಣಗಳಾಗಿದ್ದು ಉಳಿದ ಪ್ರಕರಣಗಳು ಪ್ರಾಥಮಿಕ ಸಂಪರ್ಕದಿಂದ ಬಂದಿದೆ. 42 ಮಂದಿ ಬಿಡುಗಡೆಯಾಗಿದ್ದಾರೆ.
349 ನೆಗೆಟಿವ್:
ಈ ತನಕ ಒಟ್ಟು 24,837 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 22,106 ನೆಗೆಟಿವ್, 2,222 ಪಾಸಿಟಿವ್ ಬಂದಿದ್ದು, 509 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 349 ನೆಗೆಟಿವ್, 134 ಪಾಸಿಟಿವ್ ಬಂದಿದೆ. ಒಟ್ಟು 2,087 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ.
584 ಸಕ್ರಿಯ ಪ್ರಕರಣ:
ಜಿಲ್ಲೆಯಲ್ಲಿ ಒಟ್ಟು 2,222 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 1,628 ಮಂದಿ ಬಿಡುಗಡೆಯಾಗಿದ್ದು, 584 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಕೊರೋನಾ ಪಾಸಿಟಿವ್ ಇದ್ದ 10 ಮಂದಿ ಮೃತಪಟ್ಟಿದ್ದಾರೆ.
ಇನ್ನಷ್ಟು ಮಾಹಿತಿಗೆ ಕೆಲವು ಸಮಯದ ನಂತರ ಇದೇ ಲಿಂಕ್ ನೋಡಿ